ಶಾಂತಿಮೊಗರಿನಲ್ಲಿ 22ನೇ ವರ್ಷದ ಉತ್ಸವ

bhajane
Published on

ಕಡಬ: ಕುದ್ಮಾರು ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿ ವತಿಯಿಂದ ಗಣೇಶೋತ್ಸವ ಶನಿವಾರ ಶಾಂತಿಮೊಗರು ಶ್ರೀ ಸುಬ್ರಹ್ಮಣ್ಯೇಶ್ವರ ದೇವಸ್ಥಾನದ ವಠಾರದಲ್ಲಿ ನಡೆಯಿತು. ಪುರೋಹಿತ ನರಸಿಂಹ ಪ್ರಸಾದ್ ಪಾಂಗಣ್ಣಾಯರು ನೇತೃತ್ವದಲ್ಲಿ ವಿವಿಧ ವೈದಿಕ ಕಾರ್ಯಕ್ರಮ ನಡೆಯಿತು.

ಬೆಳಗ್ಗೆ ಪಂಚಗವ್ಯ ಪುಣ್ಯಾಹ, ಶ್ರೀ ಗಣಪತಿ ವಿಗ್ರಹದ ಪ್ರತಿಷ್ಠಾಪನೆ, ಗಣಪತಿಹೋಮ, ಮಂಗಳಾರತಿ ನಡೆಯಿತು. ವಿವಿಧ ಭಜನಾ ಮಂಡಳಿಯವರಿಂದ ಭಜನಾ ಕಾರ್ಯಕ್ರಮ ನಡೆಯಿತು. ಬಳಿಕ ರಂಗಪೂಜೆ, ಮಹಾಪೂಜೆ, ಸಾರ್ವಜನಿಕ ಅನ್ನಸಂತರ್ಪಣೆ ನಡೆಯಿತು. ಕುದ್ಮಾರು ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿ ಅಧ್ಯಕ್ಷ ರಾಜ್‌ದೀಪಕ್ ಜೈನ್ ಕುದ್ಮಾರುಗುತ್ತು, ಶಾಂತಿಮೊಗರು ಶ್ರೀ ಸುಬ್ರಹಣ್ಯೇಶ್ವರ ದೇವಸ್ಥಾನ ಆಡಳಿತ ಸಮಿತಿ ಅಧ್ಯಕ್ಷ ಸತೀಶ್ ಕುಮಾರ್ ಕೆಡೆಂಜಿ, ಆನುವಂಶಿಕ ಮೊಕ್ತೇಸರ ಪ್ರವೀಣ್ ಕುಮಾರ್ ಕೆಡೆಂಜಿಗುತ್ತು, ಗಣೇಶೋತ್ಸವ ಸಮಿತಿ ಕಾರ್ಯದರ್ಶಿ ಚೆನ್ನಪ್ಪ ಗೌಡ ನೂಜಿ, ವಿವಿಧ ಸಮಿತಿ ಪದಾಧಿಕಾರಿಗಳು ಉಪಸ್ಥಿತರಿದ್ದರು. ಆಟೋಟ ಸ್ಪರ್ಧೆ ವಿಜೇತರಿಗೆ ಬಹುಮಾನ ವಿತರಿಸಲಾಯಿತು.

ಶ್ರೀ ಗಣೇಶ ವಿಗ್ರಹದ ಶೋಭಾಯಾತ್ರೆ ಶಾಂತಿಮೊಗರು ಶ್ರೀ ಸುಬ್ರಹ್ಮಣ್ಯೇಶ್ವರ ದೇವಸ್ಥಾನದಿಂದ ಹೊರಟು ಕೆಲಂಬೀರಿ- ಚಾಪಳ್ಳ ತನಕ ಸಂಚರಿಸಿ, ಮಹಾದ್ವಾರದ ಮೂಲಕ ದೇವಸ್ಥಾನಕ್ಕೆ ಬಂದು ಶಾಂತಿಮೊಗರು ಕುಮಾರಧಾರ ನದಿಯಲ್ಲಿ ಗಣಪತಿ ವಿಗ್ರಹ ವಿಸರ್ಜಿಸಲಾಯಿತು. ಮೆರವಣಿಗೆಯಲ್ಲಿ ಆಕರ್ಷಕ ಕುಣಿತ ಭಜನೆ ಮೆರುಗು ನೀಡಿತು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net