22ರಂದು ಸಚಿವರು,ಶಾಸಕರಿಗೆ ಸನ್ಮಾನ

DSC_0088--07
Published on

ಚಿತ್ರದುರ್ಗ: ತುರುವನೂರು ರಸ್ತೆಯ ರೆಡ್ಡಿ ಸಮುದಾಯ ಭವನದಲ್ಲಿ ಜು.22ರ ಬೆಳಗ್ಗೆ 11.30ಕ್ಕೆ ನಾಯಕ ಸಮಾಜ ಜಿಲ್ಲಾ ಘಟಕದಿಂದ ಜಿಲ್ಲಾ ಉಸ್ತುವಾರಿ ಸಚಿವರು, ನಾಲ್ವರು ಶಾಸಕರು, ಮಾಜಿ ಶಾಸಕರಿಗೆ ಸನ್ಮಾನ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ ಎಂದು ನಾಯಕ ಸಮಾಜದ ತಾಲೂಕು ಅಧ್ಯಕ್ಷ ಬಿ.ಕಾಂತರಾಜ್ ತಿಳಿಸಿದರು.

ಗುರುವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ಅಂದು ಸಚಿವ ಡಿ.ಸುಧಾಕರ್, ಶಾಸಕರಾದ ಬಿ.ಜಿ.ಗೋವಿಂದಪ್ಪ, ಟಿ.ರಘುಮೂರ್ತಿ, ಎನ್.ವೈ.ಗೋಪಾಲಕೃಷ್ಣ, ಕೆ.ಸಿ.ವೀರೇಂದ್ರ ಪಪ್ಪಿ, ಮಾಜಿ ಸಂಸದ ಬಿ.ಎನ್.ಚಂದ್ರಪ್ಪ, ಮಾಜಿ ಸಚಿವ ಎಚ್.ಆಂಜನೇಯ ಅವರನ್ನು ಸನ್ಮಾನಿಸಲಾಗುವುದು ಎಂದರು.

ಇದೇ ವೇಳೆ ನಾಯಕ ಸಮಾಜದ ಏಳ್ಗೆಗಾಗಿ ಪ್ರಮುಖ ಬೇಡಿಕೆಗಳನ್ನು ಈಡೇರಿಸುವಂತೆ ಸಚಿವರ ಮೂಲಕ ಸರ್ಕಾರದ ಗಮನ ಸೆಳೆ ಯ ಲಾಗುವುದು. ತಾಲೂಕುವಾರು ಇರುವಂತ ಸಮಸ್ಯೆಗಳ ಪರಿಹಾರಕ್ಕಾಗಿ ಶಾಸಕರಿಗೂ ಮನವಿ ಸಲ್ಲಿಸಲಾಗುವುದು ಎಂದು ಹೇಳಿದರು.
ಶ್ರೀ ವಾಲ್ಮೀಕಿ ಪ್ರಸನ್ನಾನಂದಪುರಿ ಸ್ವಾಮೀಜಿ ನೇತೃತ್ವ ವಹಿಸುವರು. ಕಾಂಗ್ರೆಸ್ ಮುಖಂಡ ರಮೇಶ್ ಹೊದಿಗೆರೆ ಸೇರಿ ಸಮಾಜದ ಅನೇಕರು ಪಾಲ್ಗೊಳ್ಳಲಿದ್ದಾರೆ ಎಂದರು.

ನಾಯಕ ಸಮಾಜದ ಜಿಲ್ಲಾಧ್ಯಕ್ಷ ಎಚ್.ಜೆ.ಕೃಷ್ಣಮೂರ್ತಿ, ಮುಖಂಡರಾದ ಕಾಟಿಹಳ್ಳಿ ಕರಿಯಪ್ಪ, ಅಂಜಿನಪ್ಪ, ಮಂಜಪ್ಪ, ತಿಪ್ಪೇಸ್ವಾಮಿ, ರಘುನಂದನ್ ಇತರರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net