23 ಜನರ ವಿರುದ್ಧ ಕ್ರಿಮಿನಲ್ ಕೇಸ್

4imam5-Web
ಕರ್ಫ್ಯೂ ಜಾರಿ ಹಿನ್ನೆಲೆಯಲ್ಲಿ ಬೆಳಗಾವಿ ನೆಹರು ನಗರದಲ್ಲಿ ಬ್ಯಾರಿಕೇಡ್ ಅಳವಡಿಸಿರುವುದು.
Published on

ಬೆಳಗಾವಿ: ಜಿಲ್ಲೆಯಲ್ಲಿ ಹೋಂ ಕ್ವಾರಂಟೈನ್ ನಿಯಮ ಉಲ್ಲಂಸಿದ 23 ಜನರ ವಿರುದ್ಧ ಕ್ರಿಮಿನಲ್ ಪ್ರಕರಣ ದಾಖಲಿಸಲಾಗಿದೆ ಎಂದು ಜಿಲ್ಲಾಧಿಕಾರಿ ಡಾ. ಎಸ್.ಬಿ. ಬೊಮ್ಮನಹಳ್ಳಿ ಹೇಳಿದರು.

ನಗರದಲ್ಲಿ ಗುರುವಾರ ಸುದ್ದಿಗಾರರೊಂದಿಗೆ ಅವರು ಮಾತನಾಡಿ, ಮಹಾರಾಷ್ಟ್ರದಿಂದ ಬರುವ ವಲಸಿಗರಿಗೆ 7 ದಿನಗಳವರೆಗೆ ಹೋಂ ಕ್ವಾರಂಟೈನ್‌ನಲ್ಲಿ ಇರುವಂತೆ ಸೂಚಿಸಲಾಗಿದೆ. ಸಾರ್ವಜನಿಕರ ಆರೋಗ್ಯ ಕಾಪಾಡುವ ದೃಷ್ಟಿಯಿಂದ ಈ ನಿಯಮ ರೂಪಿಸಲಾಗಿದೆ ಎಂದರು.ಬೆಳಗಾವಿ ನಗರ, ಗೋಕಾಕ, ಸಂಕೇಶ್ವರ, ಅಥಣಿ, ಹುಕ್ಕೇರಿ ಮತ್ತಿತರ ಕಡೆಗಳಲ್ಲಿ ನಿಯಮ ಉಲ್ಲಂಸಿದವರ ವಿರುದ್ಧ ಕ್ರಮ ಜರುಗಿಸಲಾಗಿದೆ ಎಂದರು. ಕರೊನಾ ಸೋಂಕು ಹರಡುವಿಕೆ ನಿಯಂತ್ರಣಕ್ಕಾಗಿ ಜನಪ್ರತಿನಿಧಿಗಳು, ಅಧಿಕಾರಿಗಳು ಮತ್ತು ಕರೊನಾ ಸೇನಾನಿಗಳು ನಿರಂತರವಾಗಿ ಶ್ರಮಿಸುತ್ತಿದ್ದಾರೆ. ಹಾಗಾಗಿ ಪ್ರತಿಯೊಬ್ಬರೂ ಹೋಂ ಕ್ವಾರಂಟೈನ್ ನಿಯಮ ಪಾಲಿಸಬೇಕು ಎಂದು ಮನವಿ ಮಾಡಿದರು.

1,411 ವರದಿ ಬಾಕಿ: ಕರೊನಾ ವೈರಸ್‌ಗೆ ಸಂಬಂಧಿಸಿದಂತೆ ಜಿಲ್ಲೆಯಲ್ಲಿ 14,555 ಜನರ ಮೇಲೆ ನಿಗಾ ಇರಿಸಲಾಗಿದೆ. 5,433 ಜನರನ್ನು 14 ದಿನ ಮನೆಯಲ್ಲಿ ಕ್ವಾರಂಟೈನ್ ಮಾಡಲಾಗಿದೆ. 97 ಮಂದಿಯನ್ನು ಐಸೋಲೇಟೆಡ್ ವಾರ್ಡ್‌ನಲ್ಲಿ ಇರಿಸಲಾಗಿದೆ. 2,000 ಜನರು 14 ದಿನಗಳ ಕ್ವಾರಂಟೈನ್ ಪೂರ್ಣಗೊಳಿಸಿದ್ದಾರೆ. 7,025 ಮಂದಿ 28 ದಿನಗಳ ಕ್ವಾರಂಟೈನ್ ಮುಗಿಸಿದ್ದಾರೆ. 13,259 ಜನರ ಗಂಟಲು ದ್ರವದ ಮಾದರಿ ಸಂಗ್ರಹಿಸಲಾಗಿದ್ದು, 11,442 ಮಾದರಿಗಳ ವರದಿ ನೆಗೆಟಿವ್ ಬಂದಿವೆ. ಜಿಲ್ಲೆಯ 126 ಸೋಂಕಿತರು ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ. 1,411 ಕರೊನಾ ಶಂಕಿತರ ಗಂಟಲು ದ್ರವದ ಪರೀಕ್ಷಾ ವರದಿ ಬರುವುದು ಬಾಕಿ ಇದೆ ಎಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಅಧಿಕಾರಿ ತಿಳಿಸಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net