23ರಂದು ನೇತಾಜಿ ವಿಷಯವಾಗಿ ಪ್ರಬಂಧ ಸ್ಪರ್ಧೆ

Published on

ಮೈಸೂರು: ನೇತಾಜಿ ಸುಭಾಷ್ ಚಂದ್ರಬೋಸ್ ಅವರ 125ನೇ ಜನ್ಮದಿನದ ಅಂಗವಾಗಿ ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾಲಯದಿಂದ ಪಿಯುಸಿ ವಿದ್ಯಾರ್ಥಿಗಳಿಗಾಗಿ ಜ.23ರಂದು ಭಾರತದ ರಾಷ್ಟ್ರೀಯತೆಗೆ ನೇತಾಜಿ ಸುಭಾಷ್ ಚಂದ್ರಬೋಸ್ ಅವರ ಕೊಡುಗೆಗಳು ವಿಷಯವಾಗಿ ಪ್ರಬಂಧ ಸ್ಪರ್ಧೆ ಆಯೋಜಿಸಲಾಗಿದೆ.
ಕನ್ನಡ ಮತ್ತು ಇಂಗ್ಲಿಷ್ ಭಾಷೆಗಳಲ್ಲಿ ಪ್ರಬಂಧ ಬರೆಯಲು ಅವಕಾಶವಿದ್ದು, ವಿಜೇತರಿಗೆ ಪ್ರಥಮ ಬಹುಮಾನ 5 ಸಾವಿರ ರೂ., ದ್ವಿತೀಯ 3 ಸಾವಿರ ರೂ., ತೃತೀಯ ಬಹುಮಾನ 2 ಸಾವಿರ ರೂ. ಹಾಗೂ ನೆನಪಿನ ಕಾಣಿಕೆ ನೀಡಲಾಗುವುದು. ಆಸಕ್ತ ಪ್ರಥಮ ಹಾಗೂ ದ್ವಿತೀಯ ಪಿಯು ವಿದ್ಯಾರ್ಥಿಗಳು ಮೊ.ಸಂ. 91108 73218 ಸಂಪರ್ಕಿಸಬಹುದು ಎಂದು ಕಾರ್ಯಕ್ರಮದ ನೋಡಲ್ ಅಧಿಕಾರಿ ಡಾ.ಪಿ. ಮಂಜುನಾಥ ಹೇಳಿಕೆಯಲ್ಲಿ ತಿಳಿಸಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net