24, 25 ರಂದು ತಾಲೂಕು ಮಟ್ಟದ ದಸರಾ ಕ್ರೀಡಾಕೂಟ

Published on

ಚನ್ನರಾಯಪಟ್ಟಣ: ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಹಾಗೂ ಶಾಲಾ ಶಿಕ್ಷಣ ಇಲಾಖೆ ವತಿಯಿಂದ ಚನ್ನರಾಯಪಟ್ಟಣ ತಾಲೂಕು ಮಟ್ಟದ ದಸರಾ ಕ್ರೀಡಾಕೂಟ ಆ.24 ಮತ್ತು 25ರಂದು ಚನ್ನರಾಯಪಟ್ಟಣ ತಾಲೂಕು ಕ್ರೀಡಾಂಗಣದಲ್ಲಿ ನಡೆಯಲಿದೆ.

ಸ್ಪರ್ಧಿಗಳು ಹೆಸರು ನೋಂದಾಯಿಸಲು ಆ.22 ಕೊನೆಯ ದಿನವಾಗಿದೆ. ತಾಲೂಕು ಮಟ್ಟದ ದಸರಾ ಕ್ರೀಡಾಕೂಟದಲ್ಲಿ ಅಥ್ಲೆಟಿಕ್ಸ್, ವಾಲಿಬಾಲ್, ಖೋ-ಖೋ, ಕಬಡ್ಡಿ, ಫುಟ್ಬಾಲ್, ಫೋಬಾಲ್, ಯೋಗ ಸ್ಪರ್ಧೆಗಳು ನಡೆಯಲಿದೆ. ವೈಯಕ್ತಿಕ ಕ್ರೀಡೆಯಲ್ಲಿ ಪ್ರಥಮ ಮತ್ತು ದ್ವಿತೀಯ ಸ್ಥಾನ ಪಡೆದವರು ಹಾಗೂ ಗುಂಪು ಕ್ರೀಡೆಯಲ್ಲಿ ಪ್ರಥಮ ಆಯ್ಕೆ ತಂಡ ಜಿಲ್ಲಾ ಮಟ್ಟದ ದಸರಾ ಕ್ರೀಡಾಕೂಟದಲ್ಲಿ ಭಾಗವಹಿಸಲು ಅರ್ಹತೆ ಹೊಂದಿರುತ್ತಾರೆ.

ಆಯಾ ತಾಲೂಕಿನ ಕ್ರೀಡಾಪಟುಗಳು ಆಯಾ ತಾಲೂಕಿನಲ್ಲಿ ಮಾತ್ರ ಭಾಗವಹಿಸಲು ಅರ್ಹತೆ ಹೊಂದಿರುತ್ತಾರೆ. ಭಾಗವಹಿಸುವ ಸಮಯದಲ್ಲಿ ಆಧಾರ್ ಕಾರ್ಡ್ ತರುವುದು ಕಡ್ಡಾಯ. ಸ್ಪರ್ಧೆ ಏರ್ಪಡಿಸಲು ಕನಿಷ್ಠ 4 ತಂಡಗಳು ಇರಬೇಕು. ಇಲ್ಲದಿದ್ದಲ್ಲಿ ಆಯ್ಕೆ ನಡೆಸಿ ಮುಂದಿನ ಹಂತಕ್ಕೆ ಕಳುಹಿಸಲಾಗುವುದು. ಒಬ್ಬರಿಗೆ ಎರಡು ವೈಯಕ್ತಿಕ ಹಾಗೂ ಒಂದು ಗುಂಪು ಸ್ಪರ್ಧೆಯಲ್ಲಿ ಮಾತ್ರ ಭಾಗವಹಿಸಲು ಅವಕಾಶವಿರುತ್ತದೆ. ಎರಡು ದಿನ ಮುಂಚಿತವಾಗಿ ತಾಲೂಕು ದೈಹಿಕ ಶಿಕ್ಷಣಾಧಿಕಾರಿಗಳ ಬಳಿ ತಂಡ ಮತ್ತು ವೈಯಕ್ತಿಕ ಆಟಗಳಿಗೆ ನೋಂದಣಿ ಕಡ್ಡಾಯವಾಗಿರುತ್ತದೆ. ನೋಂದಣಿ ಮಾಡಿಕೊಂಡವರಿಗೆ ಮಾತ್ರ ಕ್ರೀಡಾಕೂಟದಲ್ಲಿ ಭಾಗವಹಿಸಲು ಅವಕಾಶ ಇರುತ್ತದೆ. ಯಾವುದೇ ಕಾರಣಕ್ಕೂ ಕ್ರೀಡಾಕೂಟ ನಡೆಯುವ ದಿನ ಸ್ಥಳದಲ್ಲಿ ನೋಂದಣಿಗೆ ಅವಕಾಶವಿಲ್ಲ. ತೀರ್ಪುಗಾರರ ತೀರ್ಮಾನವೇ ಅಂತಿಮವಾಗಿರುತ್ತದೆ. ಕ್ರೀಡಾಕೂಟದ ಸ್ಪರ್ಧೆಗಳನ್ನು ಪ್ರತ್ಯೇಕವಾಗಿ ಪುರುಷ ಮತ್ತು ಮಹಿಳೆಯರಿಗೆ ಏರ್ಪಡಿಸಲಾಗುವುದು. ಕ್ರೀಡಾಪಟುಗಳು ತಾಲೂಕು ದೈಹಿಕ ಶಿಕ್ಷಣಾಧಿಕಾರಿಗಳು ವಿಧಿಸುವ ನಿಯಮಾನುಸಾರ ಷರತ್ತಿಗೊಳಪಟ್ಟು ಕ್ರೀಡಾಕೂಟದಲ್ಲಿ ಭಾಗವಹಿಸಲು ಕೋರಿದೆ. ಮಾಹಿತಿಗೆ ತಾಲೂಕು ಯುವಜನ ಸೇವಾ ಕ್ರೀಡಾಧಿಕಾರಿ ಕಚೇರಿಯನ್ನು ಸಂಪರ್ಕಿಸಬಹುದು ಎಂದು ಪ್ರಕಟಣೆ ತಿಳಿಸಿದೆ.

--------

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net