ಕಲ್ಯಾಣ ಕರ್ನಾಟಕ ಸಾರಿಗೆ ಸಂಸ್ಥೆಗೆ ಉತ್ತೇಜನ

NEW BUS
ಲಿಂಗಸುಗೂರು ಬಸ್ ನಿಲ್ದಾಣದಲ್ಲಿ ನೂತನ ಸಾರಿಗೆ ಬಸ್‌ಗಳ ಸಂಚಾರಕ್ಕೆ ಶಾಸಕ ಮಾನಪ್ಪ ವಜ್ಜಲ್ ಹಾಗೂ ಎಂಎಲ್‌ಸಿ ಶರಣಗೌಡ ಪಾಟೀಲ್ ಬಯ್ಯಪುರ ಹಸಿರು ನಿಶಾನೆ ತೋರಿದರು. ಸಾರಿಗೆ ಇಲಾಖೆ ನಿಯಂತ್ರಣಾಧಿಕಾರಿ ಎಂ.ಎಸ್.ಚಂದ್ರಶೇಖರ್, ವಿಭಾಗೀಯ ಸಂಚಾರ ಅಧಿಕಾರಿ ಕೆ.ಎಲ್.ಚಂದ್ರಶೇಖರ್, ವಿಭಾಗೀಯ ತಾಂತ್ರಿಕ ಶಿಲ್ಪಿ ಹಸನ್ ಅಲಿ, ತಾಪಂ ಇಒ ಅಮರೇಶ ಯಾದವ್, ಘಟಕ ವ್ಯವಸ್ಥಾಪಕ ರಾಹುಲ್ ಹೊನಸೂರೆ, ಕಾರ್ಮಿಕ ಕಲ್ಯಾಣ ಅಧಿಕಾರಿ ರವಿಕುಮಾರ್ ಇದ್ದರು.
Published on

ಲಿಂಗಸುಗೂರು: ಸರ್ಕಾರ ಕಲ್ಯಾಣ ಕರ್ನಾಟಕ ಸಾರಿಗೆ ಸಂಸ್ಥೆಗೆ ಉತ್ತೇಜನ ನೀಡುವ ಉದ್ದೇಶದಿಂದ ಹೊಸ ಬಸ್‌ಗಳನ್ನು ಖರೀದಿಸಿದ್ದು, ಈ ಪೈಕಿ ಲಿಂಗಸುಗೂರು ಡಿಪೋಗೆ ನೀಡಿದ 22 ಕೆಂಪು ಹಾಗೂ 2 ನಾನ್ ಎಸಿ ಸ್ಲೀಪರ್ ಕೋಚ್ ಬಸ್‌ಗಳ ಸಂಚಾರಕ್ಕೆ ಶಾಸಕ ಮಾನಪ್ಪ ವಜ್ಜಲ್, ಎಂಎಲ್‌ಸಿ ಶರಣಗೌಡ ಪಾಟೀಲ್ ಬಯ್ಯಪುರ ಮಂಗಳವಾರ ಹಸಿರು ನಿಶಾನೆ ತೋರಿಸಿದರು.

ಸಾರಿಗೆ ಇಲಾಖೆ ನಿಯಂತ್ರಣಾಧಿಕಾರಿ ಎಂ.ಎಸ್.ಚಂದ್ರಶೇಖರ್, ವಿಭಾಗೀಯ ಸಂಚಾರ ಅಧಿಕಾರಿ ಕೆ.ಎಲ್.ಚಂದ್ರಶೇಖರ್, ವಿಭಾಗೀಯ ತಾಂತ್ರಿಕ ಶಿಲ್ಪಿ ಹಸನ್ ಅಲಿ, ತಾಪಂ ಇಒ ಅಮರೇಶ ಯಾದವ್, ಘಟಕ ವ್ಯವಸ್ಥಾಪಕ ರಾಹುಲ್ ಹೊನಸೂರೆ, ಕಾರ್ಮಿಕ ಕಲ್ಯಾಣ ಅಧಿಕಾರಿ ರವಿಕುಮಾರ್, ಮುಖಂಡರಾದ ಶರಣಪ್ಪ ಮೇಟಿ, ಗಿರಿಮಲ್ಲನಗೌಡ ಪಾಟೀಲ್, ಚಿತ್ತವಾಡಿಗೆಪ್ಪ, ಮಹಾಂತೇಶ, ಫಾರೂಕ್ ಇತರರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net