24 ಗಂಟೆಯಲ್ಲಿ 110 ಶಂಕಿತರು ಪತ್ತೆ

carona logo
Published on

ಧಾರವಾಡ: ಜಿಲ್ಲೆಯಲ್ಲಿ 24 ಗಂಟೆ ಅವಧಿಯಲ್ಲಿ 110 ಶಂಕಿತರು ಪತ್ತೆಯಾಗಿದ್ದು, ಅವರ ಗಂಟಲ ದ್ರವ ಮಾದರಿಯನ್ನು ಪ್ರಯೋಗಾಲಯಕ್ಕೆ ಕಳುಹಿಸಲಾಗಿದೆ. ಶಂಕಿತರ ಜತೆಗೆ ನಿಗಾವಹಿಸಲಾಗಿರುವವರ ಸಂಖ್ಯೆಯಲ್ಲೂ ಏರಿಕೆಯಾಗಿದೆ. ಶನಿವಾರ ಇದ್ದ 2184 ಶಂಕಿತರ ಸಂಖ್ಯೆ ಭಾನುವಾರ 2294ಕ್ಕೆ ಏರಿಕೆಯಾಗಿದೆ.

ಈವರೆಗೆ ಜಿಲ್ಲೆಯಲ್ಲಿ 1771ಶಂಕಿತ ವ್ಯಕ್ತಿಗಳ ಗಂಟಲ ದ್ರವ ಮಾದರಿಯನ್ನು ಪ್ರಯೋಗಾಲಯಕ್ಕೆ ಕಳುಹಿಸಿದ್ದು, 1546 ಜನರ ವರದಿ ನೆಗೆಟಿವ್ ಬಂದಿವೆ. 9 ಪ್ರಕರಣದಲ್ಲಿ ಪಾಸಿಟಿವ್ ಬಂದಿದ್ದು, 7 ಜನರಿಗೆ ಕಿಮ್್ಸ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಧಾರವಾಡ ಹಾಗೂ ಹುಬ್ಬಳ್ಳಿಯ ವ್ಯಕ್ತಿಗಳು ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ. ಇನ್ನೂ 218 ವರದಿಗಳು ಬರಬೇಕಿದೆ. ವೈರಸ್ ಭೀತಿ ಹಿನ್ನೆಲೆಯಲ್ಲಿ ಜಿಲ್ಲೆಯ ಆರೋಗ್ಯ ಇಲಾಖೆಯು ವಿದೇಶದಿಂದ ಆಗಮಿಸಿರುವ ಹಾಗೂ ಅವರ ಸಂಪರ್ಕಕ್ಕೆ ಒಳಗಾದ 2294 ಜನರ ಮೇಲೆ ನಿಗಾ ಇಟ್ಟಿದೆ. ಈ ಪೈಕಿ 1521 ಜನರು ಮನೆಯಲ್ಲೇ ಪ್ರತ್ಯೇಕವಾಗಿ (14 ದಿನ) ವಾಸವಾಗಿ ದ್ದಾರೆ. ಆಸ್ಪತ್ರೆಯ ಪ್ರತ್ಯೇಕ ವಾರ್ಡಗಳಲ್ಲಿ 9 ಜನ ದಾಖಲಾಗಿದ್ದಾರೆ. 77 ಜನರು 14 ದಿನಗಳ ಪ್ರತ್ಯೇಕ ವಾಸ ಪೂರ್ಣಗೊಳಿಸಿದ್ದರೆ, 687 ಜನರು 28 ದಿನಗಳ ಪ್ರತ್ಯೇಕ ವಾಸ ಪೂರ್ಣಗೊಳಿಸಿದ್ದಾರೆ ಎಂದು ಆರೋಗ್ಯ ಇಲಾಖೆ ತಿಳಿಸಿದೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net