24 ಲಕ್ಷ ರೂ. ಮೌಲ್ಯದ ಮದ್ಯ ವಶ

h17-Liquer
Published on

ಹುಬ್ಬಳ್ಳಿ: ಅಕ್ರಮವಾಗಿ ಮದ್ಯ ಮಾರಾಟ ಆರೋಪದ ಹಿನ್ನೆಲೆಯಲ್ಲಿ ಇಲ್ಲಿನ ಬ್ಯಾಂಕರ್ಸ್ ಕಾಲನಿಯ ತೇಜ ಬಾರ್ ಮೇಲೆ ಅಬಕಾರಿ ಇಲಾಖೆ ಅಧಿಕಾರಿಗಳು ಶುಕ್ರವಾರ ದಾಳಿ ನಡೆಸಿ, ಬರೊಬ್ಬರಿ 24 ಲಕ್ಷ ರೂ. ಮೌಲ್ಯದ ಮದ್ಯ ವಶಪಡಿಸಿಕೊಂಡಿದ್ದಾರೆ.

ಲಾಕ್​ಡೌನ್ ನಡುವೆಯೂ ಅಕ್ರಮವಾಗಿ ಮದ್ಯ ಮಾರಾಟ ಮಾಡುತ್ತಿದ್ದರು. ದುಪ್ಪಟ್ಟು ಬೆಲೆಗೆ ಮಾರಾಟ ದಂಧೆ ನಡೆಸಿದ್ದರು ಎಂಬ ಆರೋಪ ಕೇಳಿ ಬಂದಿತ್ತು. ಆ ಹಿನ್ನೆಲೆಯಲ್ಲಿ ದಾಳಿ ನಡೆಸಲಾಗಿದೆ. ಬಾರ್ ವಿರುದ್ಧ ಪ್ರಕರಣ ದಾಖಲಿಸಿಕೊಂಡು ಬಾರ್​ನಲ್ಲಿದ್ದ 24 ಲಕ್ಷ ರೂ. ಮೌಲ್ಯದ ಎಲ್ಲ ಮದ್ಯವನ್ನೂ ವಶಪಡಿಸಿಕೊಂಡಿದ್ದೇವೆ ಎಂದು ಅಬಕಾರಿ ಅಧಿಕಾರಿಗಳು ತಿಳಿಸಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net