ದ.ಕ. 240, ಉಡುಪಿ 139 ಪಾಸಿಟಿವ್

Corona
Published on

ಮಂಗಳೂರು/ಉಡುಪಿ: ದ.ಕ ಜಿಲ್ಲೆಯಲ್ಲಿ ಬುಧವಾರ 10 ಸಾವು ಸೇರಿದಂತೆ 240 ಪಾಸಿಟಿವ್ ಪ್ರಕರಣ ವರದಿಯಾಗಿವೆ. ಒಟ್ಟು 299 ಮಂದಿ ಗುಣಮುಖರಾಗಿದ್ದಾರೆ. ಉಡುಪಿ ಜಿಲ್ಲೆಯಲ್ಲಿ ಬುಧವಾರ 139 ಪಾಸಿಟಿವ್ ಪ್ರಕರಣ ವರದಿಯಾಗಿದೆ. ಓರ್ವ ಬಲಿಯಾಗಿದ್ದಾರೆ. 63 ವರ್ಷ ಪ್ರಾಾಯದ ವೃದ್ಧರೊಬ್ಬರು ಕೋವಿಡ್ ಸೋಂಕಿನೊಂದಿಗೆ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾರೆ. ಅವರು ಸೆ.20ರಂದು ಚಿಕಿತ್ಸೆೆಗಾಗಿ ಆಸ್ಪತ್ರೆೆಗೆ ದಾಖಲಾಗಿದ್ದರು.187 ಮಂದಿ ಸೋಂಕಿನಿಂದ ಗುಣಮುಖರಾಗಿ ಆಸ್ಪತ್ರೆಗಳಿಂದ ಬಿಡುಗಡೆಯಾಗಿದ್ದು, ಒಟ್ಟು 2029 ಸಕ್ರಿಯ ಕೋವಿಡ್ ಪ್ರಕರಣಗಳಿವೆ.

ಕಾಸರಗೋಡು ಜಿಲ್ಲೆಯ 321 ಮಂದಿ ಸೇರಿದಂತೆ ರಾಜ್ಯದಲ್ಲಿ 8830 ಮಂದಿಗೆ ಬುಧವಾರ ಕೋವಿಡ್ 19 ಬಾಧಿಸಿದೆ. 23 ಮಂದಿ ಮೃತಪಟ್ಟಿದ್ದಾರೆ. ಚಿಕಿತ್ಸೆಯಲ್ಲಿದ್ದ ಜಿಲ್ಲೆಯ 160 ಮಂದಿ ಸೇರಿದಂತೆ ರಾಜ್ಯದಲ್ಲಿ 3536 ಮಂದಿ ಗುಣಮುಖರಾಗಿದ್ದಾರೆ.

ನಾಳೆಯಿಂದ ಪ್ರತಿಭಟನೆ

ಮಂಗಳೂರು: ಒಂದು ವಾರದಿಂದ ಮುಷ್ಕರ ನಿರತರಾಗಿರುವ ಆರೋಗ್ಯ ಸೇವೆಯ ಗುತ್ತಿಗೆ ಹಾಗೂ ಹೊರಗುತ್ತಿಗೆ ನೌಕರರ ಸಂಘದ ಬೇಡಿಕೆಗೆ ಸರ್ಕಾರ ಒಪ್ಪಿಲ್ಲ. ಆದ್ದರಿಂದ ಅ.2ರಿಂದ ಮಂಗಳೂರಿನ ಕ್ಲಾಕ್ ಟವರ್ ಬಳಿಯ ಗಾಂಧಿ ಪ್ರತಿಮೆ ಸಮೀಪ ಪ್ರತಿಭಟನೆ ನಡೆಸಲು ನಿರ್ಧರಿಸಿದ್ದಾರೆ. ಬೇಡಿಕೆ ಈಡೇರುವವರೆಗೆ ಪ್ರತಿಭಟನೆ ನಡೆಸುವುದಾಗಿ ತಿಳಿಸಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net