2400 ರೂ. ದಂಡ ವಸೂಲಿ

9-hvr-03
Published on

ರಾಣೆಬೆನ್ನೂರ: ರಾಷ್ಟ್ರೀಯ ತಂಬಾಕು ನಿಯಂತ್ರಣ ಕಾರ್ಯಕ್ರಮದಡಿ ಜಿಲ್ಲಾ ತಂಬಾಕು ನಿಯಂತ್ರಣ ಕೋಶ ಹಾಗೂ ವಿವಿಧ ಅಧಿಕಾರಿಗಳನ್ನೊಳಗೊಂಡ ತಂಡ ಗುರುವಾರ ರಾಣೆಬೆನ್ನೂರ ನಗರದ 16 ಅಂಗಡಿಗಳ ಮೇಲೆ ದಾಳಿ ನಡೆಸಿ ದಂಡ ವಸೂಲಿ ಮಾಡಿದೆ.

ತಂಬಾಕು ನಿಯಂತ್ರಣ ಕಾಯ್ದೆ ವಿರುದ್ಧವಾಗಿ ಸಾರ್ವಜನಿಕ ಸ್ಥಳಗಳಲ್ಲಿ ಧೂಮಪಾನ ಮಾಡುವ ಮತ್ತು ನೇರ-ಪರೋಕ್ಷವಾಗಿ ತಂಬಾಕು ಜಾಹೀರಾತು ಪ್ರದರ್ಶನ, ಶಾಲಾ-ಕಾಲೇಜ್ ಆವರಣದ 100 ಮೀಟರ್ ಅಂತರದೊಳಗೆ ತಂಬಾಕು ಉತ್ಪನ್ನಗಳನ್ನು ಮಾರಾಟ ಮಾಡುತ್ತಿರುವ ಅಂಗಡಿ, ಬೇಕರಿ, ಹೋಟೆಲ್ ಮತ್ತು ಹೋಲ್​ಸೇಲ್ ಅಂಗಡಿ ಮಾಲೀಕರಿಗೆ ನೋಟಿಸ್ ಜಾರಿ ಮಾಡಿ ತಂಬಾಕು ನಿಯಂತ್ರಣ ಕಾಯ್ದೆಯಡಿ 2,400 ರೂ. ದಂಡ ವಸೂಲಿ ಮಾಡಲಾಗಿದೆ.

ದಾಳಿಯಲ್ಲಿ ಜಿಲ್ಲಾ ತಂಬಾಕು ನಿಯಂತ್ರಣ ಸಲಹೆಗಾರರಾದ ಡಾ. ಸಂತೋಷ ದಡ್ಡಿ, ದಾದಾಪೀರ ಹುಲಿಕಟ್ಟಿ, ಆಹಾರ ಸುರಕ್ಷತಾ ಅಧಿಕಾರಿ ಎಸ್.ಸಿ. ಕೋಡಿ ಇತರರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net