245 ಕ್ವಿಂಟಾಲ್ ಪಡಿತರ ಅಕ್ಕಿ ವಶಕ್ಕೆ

Crime Logo
Published on

ಕಲಬುರಗಿ: ನಗರದ ಮನೆ ಮತ್ತು ಗೋಡೌನ್‌ನಲ್ಲಿ ಪ್ರತ್ಯೇಕವಾಗಿ ದಾಳಿ ನಡೆಸಿ, ಅಕ್ರಮವಾಗಿ ಸಂಗ್ರಹಿಸಿಟ್ಟಿದ್ದ ೨೪೫ ಕ್ವಿಂ. ಪಡಿತರ ಅಕ್ಕಿಯನ್ನು ಆಹಾರ ಇಲಾಖೆ ಅಧಿಕಾರಿಗಳು ಹಾಗೂ ಪೊಲೀಸರು ಜಂಟಿ ಕಾರ್ಯಚರಣೆ ನಡೆಸಿ ವಶಕ್ಕೆ ಪಡೆದಿz್ದÁರೆ. ನಗರದ ಚೌಕ್ ಠಾಣೆ ವ್ಯಾಪ್ತಿಯ ರಾಜೀವ ಗಾಂಧಿ ಆಶ್ರಯ ಕಾಲನಿಯ ಮನೆಯಲ್ಲಿ ೧೧೨ ಕ್ವಿಂಟಾಲ್‌ನ ೩.೩೩ ಲಕ್ಷ ರೂ. ಮೌಲ್ಯದ ಪಡಿತರ ಅಕ್ಕಿ ಪತ್ತೆ ಮಾಡಿ, ವಶಕ್ಕೆ ಪಡೆಯಲಾಗಿದೆ. ವಿಶ್ವವಿದ್ಯಾಲಯ ಠಾಣೆ ವ್ಯಾಪ್ತಿಯ ಸೋನಿಯಾ ಗಾಂಧಿ ಕಾಲನಿಯ ಗೋಡೌನ್‌ನಲ್ಲಿ ೧೩೩ ಕ್ವಿಂಟಾಲ್‌ನ ೩.೮೨ ಲಕ್ಷ ರೂ. ಮೌಲ್ಯದ ಪಡಿತರ ಅಕ್ಕಿಯನ್ನು ವಶಕ್ಕೆ ಪಡೆಯಲಾಗಿದೆ. ದಾಳಿ ವೇಳೆ ದಾಸ್ತಾನು ಮಾಡಿದ್ದವರು ಪರಾರಿಯಾಗಿದ್ದಾರೆ. ವಿಶ್ವವಿದ್ಯಾಲಯ ಮತ್ತು ಚೌಕ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net