24ರಂದು ಅಂಗವಿಕಲರಿಗೆ ಸಲಕರಣೆಗಳ ವಿತರಣೆ

167ca08d-733f-4ca7-9817-46a5c2277dda--04
Published on

ಚಿತ್ರದುರ್ಗ:ಕೇಂದ್ರ ಸಾಮಾಜಿಕ ನ್ಯಾಯ ಮತ್ತು ಸಬಲೀಕರಣ ಸಚಿವಾಲಯ,ಅಂಗವಿಕಲರ ಸಬಲೀಕರಣ ಇಲಾಖೆ,ಕೃತಕ ಅಂಗಾಂಗ ತಯಾ ರಿಕ ಕಾರ್ಪೋರೇಷನ್ ಆಫ್‌ಇಂಡಿಯಾ,ಜಿಲ್ಲಾಡಳಿತ ಮತ್ತು ಜಿಪಂ ಆಶ್ರಯದಲ್ಲಿ ಅಂಗವಿಕಲರಿಗೆ ಉಚಿತವಾಗಿ ಸಾಧನ,ಸಲಕರಣೆಗಳ ಸಮ ರ್ಪಣೆ ಕಾರ‌್ಯಕ್ರಮವನ್ನು ಸೆ.24ರಂದು ಬೆಳಗ್ಗೆ 11ಕ್ಕೆ ನಗರದ ಹಳೇ ಮಾಧ್ಯಮಿಕ ಶಾಲಾ ಆವರಣದಲ್ಲಿ ಏರ್ಪಡಿಸಲಾಗಿದೆ. ಕೇಂದ್ರ ಸಚಿವ ಎ.ನಾ ರಾಯಣಸ್ವಾಮಿ ಕಾರ‌್ಯಕ್ರಮ ಉದ್ಘಾಟಿಸುವರು. ಜಿಲ್ಲಾ ಉಸ್ತುವಾರಿ ಸಚಿವ ಡಿ.ಸುಧಾಕರ್ ಉಪಸ್ಥಿತರಿರುವ ಹಾಗೂ ಶಾಸಕರು,ವಿಧಾನ ಪರಿಷತ್ ಸದಸ್ಯರು ಉಪಸ್ಥಿತರಿರುವ ಈ ಕಾರ‌್ಯಕ್ರಮದ ಅಧ್ಯಕ್ಷತೆಯನ್ನು ಚಿತ್ರದುರ್ಗ ಶಾಸಕ ಕೆ.ಸಿ.ವೀರೇಂದ್ರಪಪ್ಪಿ ವಹಿಸುವರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net