24ರಂದು ಅಂಗವಿಕಲರಿಗೆ ಸಲಕರಣೆಗಳ ವಿತರಣೆ

disability equipment--00003
Published on

ಚಿತ್ರದುರ್ಗ: ಭಾರತೀಯ ಸ್ಟೇಟ್ ಬ್ಯಾಂಕ್, ಭಾರತೀಯ ಕೃತಕ ಅಂಗಗಳ ಉತ್ಪಾದನಾ ನಿಗಮ(ಅಲಿಂಕೋ) ಹಾಗೂ ಜಿಲ್ಲಾಡಳಿತದಿ ಂದ ಮಾ.24ರಂದು ಬೆಳಗ್ಗೆ 10.30ಕ್ಕೆ ನಗರದ ಸರ್ಕಾರಿ ವಿಜ್ಞಾನ ಕಾಲೇಜು ಮೈದಾನದಲ್ಲಿ ಅಂಗವಿಕಲರಿಗೆ ಉಚಿತ ಸಾಧನ ಮತ್ತು ಸಲಕರಣೆಗಳ ವಿತರಣೆ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ.

ಜಿಲ್ಲಾ ಉಸ್ತುವಾರಿ ಸಚಿವ ಡಿ. ಸುಧಾಕರ್ ಉದ್ಘಾಟಿಸುವರು. ಸಂಸದ ಗೋವಿಂದ ಎಂ. ಕಾರಜೋಳ ಸಾಧನ ಸಲಕರಣೆಗಳನ್ನು ವಿತರಿಸುವರು. ಶಾಸಕ ಕೆ.ಸಿ. ವೀರೇಂದ್ರ ಪಪ್ಪಿ ಅಧ್ಯಕ್ಷತೆ ವಹಿಸುವರು. ಶಾಸಕರು, ವಿಧಾನ ಪರಿಷತ್ ಸದಸ್ಯರು, ನಿಗಮ, ಮಂಡಳಿ, ನಗರಸಭೆ, ಪ್ರಾಧಿಕಾರ ಅಧ್ಯಕ್ಷರು ಹಾಗೂ ಹಿರಿಯ ಅಧಿಕಾರಿಗಳು ಮುಖ್ಯ ಅತಿಥಿಗಳಾಗಿ ಭಾಗವಹಿಸುವರು.

ಕೇಂದ್ರದ ಅಡಿಪ್ ಯೋಜನೆ ಹಾಗೂ ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾದ ಸಿಎಸ್‌ಆರ್ ಅನುದಾನದಡಿ ಉಚಿತವಾಗಿ ಸಾಧನ- ಸಲಕರಣೆಗಳನ್ನು ವಿತರಿಸಲು ಜಿಲ್ಲೆಯ 512 ಅಂಗವಿಕಲ ಫಲಾನುಭವಿಗಳನ್ನು ಗುರುತಿಸಲಾಗಿದೆ ಎಂದು ಜಿಲ್ಲಾ ಅಂಗವಿಕಲರ ಕಲ್ಯಾ ಣಾಧಿಕಾರಿ ಜೆ. ವೈಶಾಲಿ ತಿಳಿಸಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net