24ರಂದು ಅಭಿನಂದನೆ,ಪ್ರತಿಭಾ ಪುರಸ್ಕಾರ ಸಮಾರಂಭ

IMG-20230721-WA0026--06
Published on

ಚಿತ್ರದುರ್ಗ: ರಾಜ್ಯಸರ್ಕಾರಿ ನೌಕರರ ಸಂಘದ ಜಿಲ್ಲಾ ಶಾಖೆಯಿಂದ ಜು.24ರಂದು ಬೆಳಗ್ಗೆ 10.30ಕ್ಕೆ ತರಾಸು ರಂಗಮಂದಿದಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಡಿ.ಸುಧಾಕರ್ ಹಾಗೂ ಜಿಲ್ಲೆಯ ಶಾಸಕರು,ವಿಧಾನ ಪರಿಷತ್ ಸದಸ್ಯರಿಗೆ ಅಭಿನಂದನೆ ಹಾಗೂ ಎಸ್ಸೆಸ್ಸೆಲ್ಸಿ ಮತ್ತು ಸೆಕೆಂಡ್ ಪಿಯುಸಿ ಪರೀಕ್ಷೆಯಲ್ಲಿ ಹೆಚ್ಚಿನ ಅಂಕಗಳೊಂದಿಗೆ ಉತ್ತೀಣರಾದ ಸರ್ಕಾರಿ ನೌಕರರ ಮಕ್ಕಳಿಗೆ ಪ್ರತಿಭಾ ಪುರಸ್ಕಾರ ಸಮಾರಂಭವನ್ನು ಏರ್ಪ ಡಿಸಲಾಗಿದೆ.

ಜಿಲ್ಲಾ ಉಸ್ತುವಾರಿ ಸಚಿವ ಡಿ.ಸುಧಾಕರ್ ಕಾರ‌್ಯಕ್ರಮ ಉದ್ಘಾಟಿಸುವರು. ಕೇಂದ್ರ ಸಚಿವ ಎ.ನಾರಾಯಣಸ್ವಾಮಿ ಘನ ಉಪಸ್ಥಿತಿ ವಹಿ ಸು ವರು. ಸಂಘದ ಜಿಲ್ಲಾಧ್ಯಕ್ಷ ಕೆ.ಟಿ.ತಿಮ್ಮಾರೆಡ್ಡಿ ಅಧ್ಯಕ್ಷತೆ ವಹಿಸಿವರು. ಶಾಸಕ ಕೆ.ಸಿ.ವೀರೇಂದ್ರ ಪಪ್ಪಿ, ರಾಜ್ಯಸರ್ಕಾರಿ ನೌಕರರ ಸಂಘದ ಅಧ್ಯಕ್ಷ ಸಿ.ಎಸ್.ಷಡಾಕ್ಷರಿ ವಿದ್ಯಾರ್ಥಿಗಳಿಗೆ ಸನ್ಮಾನಿಸುವರು. ಶಾಸಕರು,ಹಾಗೂ ವಿಧಾನ ಪರಿಷತ್ ಸದಸ್ಯರಿಗೆ ಗೌರವ ಸಮರ್ಪಿಸಲಾಗು ವುದು. ಹಿರಿಯ ಅಧಿಕಾರಿಗಳು ಉಪಸ್ಥಿತರಿರುವರು.

ಸರ್ವಸದಸ್ಯರ ಸಭೆ
ಅಂದು ಮಧ್ಯಾಹ್ನ 12.30ಕ್ಕೆ ತರಾಸು ರಂಗಮಂದಿರದಲ್ಲಿ ಸಂಘದ ಜಿಲ್ಲಾ ಶಾಖೆಯ ಸರ್ವ ಸದಸ್ಯರ ವಾರ್ಷಿಕ ಸಭೆ ಹಾಗೂ ನೂತನ ಪದಾ ಧಿಕಾರಿಗಳ ಪದಗ್ರಹಣ ಸಮಾರಂಭ ನಡೆಯಲಿದೆ. ರಾಜ್ಯ ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ಸಿ.ಎಸ್.ಷಡಾಕ್ಷರಿ,ಸಂಘದ ಜಿಲ್ಲಾಧ್ಯಕ್ಷ ಕೆ.ಟಿ. ತಿಮ್ಮಾರೆಡ್ಡಿ ಮತ್ತಿತರ ಪ್ರಮುಖರು ಭಾಗವಹಿಸುವರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net