24ರಂದು ಪ್ರತಿಭಾ ಪುರಸ್ಕಾರ

CC00004
Published on

ಚಿತ್ರದುರ್ಗ: ಕುಂಚಿಗ ವೀರಶೈವ ಲಿಂಗಾಯತ ಸಮಾಜದಿಂದ ಆ.24ರ ಬೆಳಗ್ಗೆ 10.45ಕ್ಕೆ ನೀಲಕಂಠೇಶ್ವರ ಸಮುದಾಯ ಭವನದಲ್ಲಿ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ಹಾಗೂ ಸನ್ಮಾನ ಸಮಾರಂಭ ಏರ್ಪಡಿಸಲಾಗಿದೆ. 2023-24ನೇ ಶೈಕ್ಷಣಿಕ ಸಾಲಿನಲ್ಲಿ ಎಸ್ಸೆಸ್ಸೆಲ್ಸಿ ಮತ್ತು ಸೆಕೆಂಡ್ ಪಿಯಸಿ ಪರೀಕ್ಷೆಗಳಲ್ಲಿ ಅತಿ ಹೆಚ್ಚಿನ ಅಂಕಗಳೊಂದಿಗೆ ಉತ್ತೀರ್ಣರಾದ ಸಮಾಜದ ವಿದ್ಯಾರ್ಥಿಗಳನ್ನು ಪುರಸ್ಕರಿಸಲಾಗುವುದು ಹಾಗೂ ಡಾ.ಎಂ.ಯೋಗೇಂದ್ರ, ಡಾ.ಅರವಿಂದ ಪಾಟೀಲ್ ಅವರನ್ನು ಸನ್ಮಾನಿಸಲಾಗುವುದು.
ಮಾಜಿ ಶಾಸಕ, ಕುಂಚಿಗ ವೀರಶೈವ ಲಿಂಗಾಯತ ಸಮಾಜದ ಅಧ್ಯಕ್ಷ ಎಂ.ಬಿ.ತಿಪ್ಪೇರುದ್ರಪ್ಪ ಅಧ್ಯಕ್ಷತೆ ವಹಿಸುವರು. ನಿವೃತ್ತ ಮುಖ್ಯ ಅರಣ್ಯ ಸಂರಕ್ಷಣಾಧಿಕಾರಿ ಎಸ್.ಪರಮೇಶ್ವರಪ್ಪ, ಮಾಜಿ ಶಾಸಕರಾದ ಟಿ.ಎಚ್.ಬಸವರಾಜ್, ಪಿ.ರಮೇಶ್, ನಿವೃತ್ತ ಪ್ರಾಚಾರ್ಯ ಬಿ.ಸಿ.ಕಾಂತರಾಜ್ ಮುಖ್ಯಅತಿಥಿಗಳಾಗಿ ಭಾಗವಹಿಸಲಿದ್ದಾರೆ ಎಂದು ಸಮಾಜದ ಕಾರ್ಯದರ್ಶಿ ಎಚ್.ಕುಬೇರಪ್ಪ ದಗ್ಗೆ ತಿಳಿಸಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net