24ರಂದು ರಾಷ್ಟ್ರೀಯ ಗ್ರಾಹಕರ ದಿನಾಚರಣೆ

CTD--0009
Published on

ಚಿತ್ರದುರ್ಗ: ನಗರದ ತರಾಸು ರಂಗಮಂದಿರದಲ್ಲಿ ಡಿ.24ರಂದು ಬೆಳಗ್ಗೆ 10.30ಕ್ಕೆ ರಾಷ್ಟ್ರೀಯ ಗ್ರಾಹಕರ ದಿನಾಚರಣೆ ನಡೆಯಲಿದೆ. ಗ್ರಾಹಕರ ನ್ಯಾಯಕ್ಕಾಗಿ ವರ್ಚುವಲ್ ವಿಚಾರಣೆಗಳು ಮತ್ತು ಡಿಜಿಟಲ್ ಹಾದಿ ಎಂಬ ಘೋಷವಾಕ್ಯದೊಂದಿಗೆ ದಿನಾಚರಣೆ ಹಮ್ಮಿಕೊಂಡಿದ್ದು, ಡಿಸಿ ಟಿ. ವೆಂಕಟೇಶ್ ಅಧ್ಯಕ್ಷತೆ ವಹಿಸುವರು. ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶ ರೋಣ್ ವಾಸುದೇವ ಉದ್ಘಾಟಿಸುವರು. ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಪ್ರಭಾರ ಸದಸ್ಯ ಕಾರ್ಯದರ್ಶಿ, ನ್ಯಾಯಾಧೀಶೆ ಚೈತ್ರಾ, ಜಿಲ್ಲಾ ಗ್ರಾಹಕರ ವ್ಯಾಜ್ಯಗಳ ಪರಿಹಾರ ಆಯೋಗದ ಅಧ್ಯಕ್ಷೆ ಎಚ್. ಎನ್. ಮೀನಾ, ವಕೀಲರ ಸಂಘದ ಅಧ್ಯಕ್ಷ ವೈ. ತಿಪ್ಪೇಸ್ವಾಮಿ, ಪ್ರಾಚಾರ್ಯರಾದ ಡಾ.ಎಂ.ಎಚ್. ಸುಧಾದೇವಿ, ಡಾ.ಎಸ್. ದಿನೇಶ್ ಭಾಗವಹಿಸುವರು. ಪ್ರಧಾನ ಕಾನೂನು ನೆರವು ಅಭಿರಕ್ಷಕ ಎಸ್. ವಿಜಯ್‌ಕುಮಾರ್, ಗ್ರಾಹಕರ ಸಂರಕ್ಷಣಾ ಕಾಯ್ದೆ ಕುರಿತು ಉಪನ್ಯಾಸ ನೀಡುವರು ಎಂದು ಪ್ರಕಟಣೆ ತಿಳಿಸಿದೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net