24ರಿಂದ ಲೋಕಾಯುಕ್ತರಿಂದ ಅಹವಾಲು ಸ್ವೀಕಾರ

CTD N.VASUDEVARAMAA----
Published on

ಚಿತ್ರದುರ್ಗ: ಕರ್ನಾಟಕ ಲೋಕಾಯುಕ್ತ ಚಿತ್ರದುರ್ಗ ವಿಭಾಗದ ಅಧಿಕಾರಿಗಳು ಜಿಲ್ಲೆಯ ಎಲ್ಲ ತಾಲೂಕು ಕೇಂದ್ರಗಳಲ್ಲಿ ಫೆ.24 ರಿಂದ ಸಾರ್ವಜನಿಕರಿಂದ ದೂರು, ಅಹವಾಲುಗಳನ್ನು ಸ್ವೀಕರಿಸಲಿದ್ದಾರೆ. ಫೆ. 24ರಂದು ಬೆಳಗ್ಗೆ 10.30 ರಿಂದ ಮಧ್ಯಾಹ್ನ 1.30 ರವರೆಗೆ ಮೊಳಕಾಲ್ಮೂರು ಪಪಂ ಕಚೇರಿ, ಅದೇ ದಿನ ಮಧ್ಯಾಹ್ನ 2.30 ರಿಂದ ಸಂಜೆ 5.30ರವರೆಗೆ ಚಳ್ಳಕೆರೆ ನಗರಸಭೆ ಕಚೇರಿಯಲ್ಲಿ ಲೋಕಾಯುಕ್ತ ಪಿಐ ದೂರು ಸ್ವೀಕರಿಸಿವರು. 25ರಂದು ಬೆಳಗ್ಗೆ 10.30ರಿಂದ ಮಧ್ಯಾಹ್ನ 1.30ರವರೆಗೆ ಹೊಸದುರ್ಗ ಪುರಸಭೆ, ಮಧ್ಯಾಹ್ನ 2.30 ರಿಂದ ಸಂಜೆ 5.30ರವರೆಗೆ ಹೊಳಲ್ಕೆರೆ ಪುರಸಭೆ ಕಚೇರಿಯಲ್ಲಿ ಲೋಕಾಯುಕ್ತ ಡಿವೈಎಸ್‌ಪಿ, ಅದೇ ದಿನ ಬೆಳಗ್ಗೆ 10.30ರಿಂದ ಮಧ್ಯಾಹ್ನ 1.30 ರವರೆಗೆ ಚಿತ್ರದುರ್ಗ ನಗರಸಭೆಯಲ್ಲಿ ಪಿಐ ಹಾಗೂ ಅದೇ ದಿನ ಬೆಳಗ್ಗೆ 10.30 ರಿಂದ ಮಧ್ಯಾಹ್ನ 1.30ರವರೆಗೆ ಹಿರಿಯೂರು ನಗರಸಭೆಯಲ್ಲಿ ಪಿಐ ಹಾಜರಿದ್ದು ಸಾರ್ವಜನಿಕರಿಂದ ಅಹವಾಲು ಸ್ವೀಕರಿಸಲಿದ್ದಾರೆಂದು ಲೋಕಾಯುಕ್ತ ಎಸ್‌ಪಿ ಎನ್. ವಾಸುದೇವರಾಮ ತಿಳಿಸಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net