

ತುಮಕೂರು: ನಗರದ ಅಮಾನಿಕೆರೆಯಲ್ಲಿ 25 ಕೋಟಿ ರೂ. ವೆಚ್ಚದಲ್ಲಿ ಗ್ಲಾಸ್ ಬ್ರಿಡ್ಜ್(ಗಾಜಿನ ಸೇತುವೆ) ನಿಮಾರ್ಣಕ್ಕೆ ಪ್ರವಾಸೋದ್ಯಮ ಇಲಾಖೆ ವತಿಯಿಂದ ನೀಲ ನಕ್ಷೆ ತಯಾರಿಸಲಾಗಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಡಾ.ಜಿ.ಪರಮೇಶ್ವರ ತಿಳಿಸಿದರು.
ನಗರದ ಮಹಾತ್ಮಗಾಂಧಿ ಕ್ರೀಡಾಂಗಣದಲ್ಲಿ ಭಾನುವಾರ ಗಣರಾಜ್ಯೋತ್ಸವ ಧ್ವಜಾರೋಹಣ ನೆರವೇರಿಸಿದ ನಂತರ ಸುದ್ದಿಗಾರರ ಜತೆ ಮಾತನಾಡಿದಅ ಅವರು, ತುಮಕೂರು ನಗರದ ಸಮಗ್ರ ಅಭಿವೃದ್ಧಿಗೆ ವಿಶೇಷ ಅನುದಾನ ಒದಗಿಸಲಾಗುತ್ತಿದೆ ಎಂದು ಭರವಸೆ ನೀಡಿದರು.
ಮಹಾತ್ಮಗಾಂಧಿ ನಗರ ವಿಕಾಸ ಯೋಜನೆಯಡಿ ತುಮಕೂರು ಮಹಾನಗರಪಾಲಿಕೆ ವ್ಯಾಪ್ತಿಯಲ್ಲಿ ವಿವಿಧ ಅಭಿವೃದ್ಧಿ ಕಾಮಗಾರಿ ಕೈಗೊಳ್ಳಲು 200 ಕೋಟಿ ರೂ. ಅನುದಾನಕ್ಕೆ ಸರ್ಕಾರ ಅನುಮೋದನೆ ನೀಡಿದ್ದು, ಈ ಅನುದಾನದಲ್ಲಿ 25 ಕೋಟಿ ರೂ. ಬಳಸಿಕೊಂಡು ಗಾಜಿನ ಸೇತುವೆ ನಿರ್ಮಿಸಲು ಉದ್ದೇಶಿಸಲಾಗಿದೆ ಎಂದು
ಸ್ಮಾರ್ಟ್ ಸಿಟಿ ಯೋಜನೆಯಡಿ ಮಹಾನಗರ ಪಾಲಿಕೆ ವ್ಯಾಪ್ತಿಯ 5 ವಾರ್ಡ್ ಈಗಾಗಲೇ ಅಭಿವೃದ್ಧಿಪಡಿಸಲಾಗಿದ್ದು, ಇದೇ ಮಾದರಿತಲ್ಲಿ ಇನ್ನುಳಿದ 30 ವಾರ್ಡ್ಗಳ ಅಭಿವೃದ್ಧಿಗಾಗಿ 200 ಕೋಟಿ ರೂ. ಬಳಸಿಕೊಳ್ಳಲಾಗುವುದು ಎಂದರು.
ಬೆಂಗಳೂರಿನ ಲಾಲ್ಬಾಗ್ ಮಾದರಿಯಲ್ಲಿ ನಗರದ ಅಕ್ಕ-ತಂಗಿ ಕೆರೆ ಅಭಿವೃದ್ಧಿ, 137 ಕೋಟಿ ರೂ. ವೆಚ್ಚದಲ್ಲಿ ನಗರದಲ್ಲಿ 202 ರಸ್ತೆ ನಿಮಾರ್ಣ, ಅಮಾನಿಕೆರೆಯನ್ನು ಸ್ವಚ್ಛಗೊಳಿಸಿ ಮಕ್ಕಳಿಗಾಗಿ ಸಾಹಸ ಕ್ರೀಡೆಗೆ ಅವಕಾಶ ನೀಡುವುದರೊಂದಿಗೆ ಐಲ್ಯಾಂಡ್, ರ್ಬಡ್ ಪಾರ್ಕ್ ನಿಮಾರ್ಣ, 18 ಉದ್ಯಾನವನಗಳ ಅಭಿವೃದ್ಧಿ, ತಲಾ 6 ಕೋಟಿ ರೂ. ವೆಚ್ಚದಲ್ಲಿ ನಗರದ ಖಾಸಗಿ ಬಸ್ ನಿಲ್ದಾಣದ ಆಧುನೀಕರಣ ಹಾಗೂ ಗುಬ್ಬಿ ವೀರಣ್ಣ ಕಲಾ ಕ್ಷೇತ್ರದ ಕಟ್ಟಡದ ಅಭಿವೃದ್ಧಿಗೆ ಚಿಂತನೆ ನಡೆದಿದೆ ಎಂದರು.
ನಗರದ ಒಳಚರಂಡಿ ವ್ಯವಸ್ಥೆಗಾಗಿ ಪ್ರತ್ಯೇಕವಾಗಿ 50ಕೋಟಿ ರೂ. ಮೀಸಲಿಡಲಾಗಿದೆಯಲ್ಲದೆ ಕರ್ನಾಟಕ ಗಣಿಬಾಧಿತ ಪರಿಸರದ ಪುನ@ಶ್ಚೇತನ ನಿಧಿಯಡಿ 131 ಕೋಟಿ ರೂ. ವೆಚ್ಚದಲ್ಲಿ ಜಿಲ್ಲಾಸ್ಪತ್ರೆ ಕಟ್ಟಡವನ್ನು ಮೇಲ್ದರ್ಜೆಗೇರಿಸಲು ಕ್ರಮ ಕೈಗೊಳ್ಳಗುವುದು ಎಂದರು.
ನಗರದಲ್ಲಿ ವಧಾಗಾರ ನಿಮಾರ್ಣಕ್ಕೆ ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸಲಾಗಿದೆ. ನಾಗರಿಕರ ಆರೋಗ್ಯದ ಹಿತದೃಷ್ಟಿಯಿಂದ ನೈರ್ಮಲ್ಯತೆ(ಹೈಜೆನಿಕ್)ಯಿಂದ ಕೂಡಿದ ಮಾಂಸ ಮಾರಾಟ ಮಾರುಕಟ್ಟೆಯನ್ನು ನಿರ್ಮಿಸಲು ಪಾಲಿಕೆ ಮುಂದಾಗಿದೆ ಎಂದು ಹೇಳಿದರು.