

ಮೈಸೂರು: ಭಾರತ ಚುನಾವಣಾ ಆಯೋಗದ ನಿರ್ದೇಶದಂತೆ ಜಿಲ್ಲಾಡಳಿತ ಹಾಗೂ ಜಿಲ್ಲಾ ಸ್ವೀಪ್ ಸಮಿತಿ ವತಿಯಿಂದ ಜ.25 ರಂದು ರಾಷ್ಟ್ರೀಯ ಮತದಾರರ ದಿನ ಕಾರ್ಯಕ್ರಮ ಆಯೋಜಿಸಲಾಗಿದೆ.
ಅಂದು ಬೆಳಗ್ಗೆ 9 ಗಂಟೆಗೆ ಮೈಸೂರು ವಿಶ್ವ ವಿದ್ಯಾಲಯದ ಓವೆಲ್ ಮೈದಾನದಿಂದ ಕಲಾಮಂದಿರದವರೆಗೂ ಕಾಲೇಜು ವಿದ್ಯಾರ್ಥಿಗಳಿಂದ ಜಾಥಾ ನಡೆಯಲಿದೆ. ಬಳಿಕ 10.30ಕ್ಕೆ ಕಲಾಮಂದಿರದಲ್ಲಿ ವೇದಿಕೆ ಕಾರ್ಯಕ್ರಮ ನಡೆಯಲಿದ್ದು, ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರು ಉದ್ಘಾಟಿಸಲಿದ್ದಾರೆ. ಜಿಲ್ಲಾಧಿಕಾರಿ ಡಾ.ಕೆ.ವಿ.ರಾಜೇಂದ್ರ ಅಧ್ಯಕ್ಷತೆ ವಹಿಸಲಿದ್ದಾರೆ. ಜಿಲ್ಲಾ ಪೊಲೀಸ್ ಆಯುಕ್ತ ಬಿ.ರಮೇಶ್, ಜಿಪಂ ಕಾರ್ಯನಿರ್ವಹಣಾಧಿಕಾರಿ ಗಾಯತ್ರಿ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಸೀಮಾ ಲಾಟ್ಕರ್ ಜಿಲ್ಲಾ ಸ್ವೀಪ್ ರಾಯಭಾರಿಗಳಾದ ಜಾವಗಲ್ ಶ್ರೀನಾಥ್, ಖುಷಿ, ಮಹೇಂದ್ರ ಭಾಗವಹಿಸಲಿದ್ದಾರೆ.