25 ಐಸಿಯು ಬೆಡ್ ಸಹಿತ ತಾತ್ಕಾಲಿಕ ಆಸ್ಪತ್ರೆ ನಿರ್ಮಾಣ, ಸ್ಥಳ ಪರಿಶೀಲನೆ ನಡೆಸಿದ ತಹಸೀಲ್ದಾರ್ ಟಿ.ಎಸ್. ಶಿವರಾಜು

27dbp3(ICu beds)
Published on

ದೊಡ್ಡಬಳ್ಳಾಪುರ: ತಾಲೂಕಿನಲ್ಲಿ ಕರೊನಾ ಸೋಂಕಿತರ ಸಂಖ್ಯೆ ಹೆಚ್ಚಾಗುತ್ತಿರುವಂತೆ ತಾಲೂಕು ಆಡಳಿತ ಹೆಚ್ಚುವರಿ ಹಾಸಿಗೆಗಳನ್ನು ವ್ಯವಸ್ಥೆ ಮಾಡಲು ತಾತ್ಕಾಲಿಕ ಆಸ್ಪತ್ರೆ ನಿರ್ಮಾಣಕ್ಕೆ ಮುಂದಾಗಿದೆ. 25 ಐಸಿಯು ಬೆಡ್ ಹಾಗೂ 100 ಹಾಸಿಗೆಗಳ ಸೌಲಭ್ಯ ಕಲ್ಪಿಸಲಾಗುವುದು ಎಂದು ತಹಸೀಲ್ದಾರ್ ಟಿ.ಎಸ್. ಶಿವರಾಜು ತಿಳಿಸಿದರು.

ನಗರದ ಪ್ರವಾಸಿ ಮಂದಿರ ಬಳಿಯ ಸಾರ್ವಜನಿಕ ಆಸ್ಪತ್ರೆ ಪಕ್ಕದಲ್ಲಿರುವ ಜಾಗದಲ್ಲಿ ತಾತ್ಕಾಲಿಕವಾಗಿ ಆಸ್ಪತ್ರೆ ನಿರ್ಮಾಣ ಮಾಡಲು ಜಿಲ್ಲಾಧಿಕಾರಿ ಕೆ. ಶ್ರೀನಿವಾಸ್ ಸೂಚನೆ ನೀಡಿದ ಹಿನ್ನೆಲೆಯಲ್ಲಿ ಮಂಗಳವಾರ ಸ್ಥಳ ಪರಿಶೀಲನೆ ನಡೆಸಿದರು. ಆ ಜಾಗವನ್ನು ಅಂತಿಮಗೊಳಿಸಿದ ಅವರು, ಕಾಮಗಾರಿ ಆರಂಭಿಸಲು ನಗರಸಭೆ, ಬೆಸ್ಕಾಂ ಮತ್ತಿತರ ಇಲಾಖೆಗಳ ಪ್ರಮುಖರಿಗೆ ನಿರ್ದೇಶನ ನೀಡಿದರು.

ಕರೊನಾ ನಿಯಂತ್ರಣಕ್ಕೆ ತಾಲೂಕಿನ ಸಾರ್ವಜನಿಕ ಆಸ್ಪತ್ರೆಯಲ್ಲಿ 63 ಹಾಗೂ ಇಸ್ತೂರಿನಲ್ಲಿ 43 ಬೆಡ್‌ಗಳ ಆಸ್ಪತ್ರೆ ಕಾರ್ಯನಿರ್ವಹಿಸುತ್ತಿದೆ. ಮಾಡೇಶ್ವರ ಗ್ರಾಮದಲ್ಲಿ 100 ಬೆಡ್‌ಗಳ ಕೋವಿಡ್ ಆಸ್ಪತ್ರೆ ಸಿದ್ಧವಾಗುತ್ತಿದ್ದು, ಕಾಮಗಾರಿ ಅಂತಿಮ ಹಂತದಲ್ಲಿದೆ. ಈಗ ಡಿಸಿ ಅವರ ಸೂಚನೆ ಮೇರೆಗೆ ಆಸ್ಪತ್ರೆ ನಿರ್ಮಾಣಕ್ಕೆ ಸ್ಥಳ ಗುರುತಿಸಲಾಗಿದೆ. ಇನ್ನು ನಾಲ್ಕೈದು ದಿನಗಳಲ್ಲಿ ಕಾಮಗಾರಿ ಪೂರ್ಣಗೊಂಡು, ಸಾರ್ವಜನಿಕ ಸೇವೆಗೆ ಮುಕ್ತವಾಗಲಿದೆ. ಟಿ.ಎಸ್ ಶಿವರಾಜು, ತಹಸೀಲ್ದಾರ್

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net