25 ರೋಗಿಗಳಿಗೆ ಡಯಾಲಿಸಿಸ್ ಉಚಿತ ಚಿಕಿತ್ಸೆ

TKE amba
ತರೀಕೆರೆ ಸರ್ಕಾರಿ ಸಾರ್ವಜನಿಕ ಆಸ್ಪತ್ರೆ ಡಯಾಲಿಸಿಸ್ ಕೇಂದ್ರದ ನಿರ್ವಹಣೆ ಮಾಡುತ್ತಿರುವ ಖಾಸಗಿ ಕಂಪನಿ ತಂಡದ ಪ್ರಮುಖರೊಂದಿಗೆ ಆಡಳಿತ ವೈದ್ಯಾಧಿಕಾರಿ ಡಾ. ಟಿ.ಎಂ.ದೇವರಾಜ್ ಚರ್ಚಿಸುತ್ತಿರುವುದು.
Published on

ತರೀಕೆರೆ: ಖಾಸಗಿ ಕಂಪನಿ ನಿರ್ವಹಿಸುತ್ತಿರುವ ಡಯಾಲಿಸಿಸ್ ಕೇಂದ್ರಕ್ಕೆ ಸರ್ಕಾರ ಪ್ರತಿ ಡಯಾಲಿಸಿಸ್‌ಗೆ 1,573 ರೂ. ಪಾವತಿಸುತ್ತಿದೆ ಎಂದು ಸರ್ಕಾರಿ ಸಾರ್ವಜನಿಕ ಆಸ್ಪತ್ರೆ ಆಡಳಿತ ವೈದ್ಯಾಧಿಕಾರಿ ಡಾ. ಟಿ.ಎಂ.ದೇವರಾಜ್ ತಿಳಿಸಿದರು.

ಪಟ್ಟಣದ ಸರ್ಕಾರಿ ಸಾರ್ವಜನಿಕ ಆಸ್ಪತ್ರೆಯ ಡಯಾಲಿಸಿಸ್ ಕೇಂದ್ರಕ್ಕೆ ಶುಕ್ರವಾರ ಭೇಟಿ ನೀಡಿ ಪರಿಶೀಲಿಸಿ ಮಾತನಾಡಿದ ಅವರು, ಆಸ್ಪತ್ರೆಯಲ್ಲಿ ನಾಲ್ಕು ಗುಣಮಟ್ಟದ ಡಯಾಲಿಸಿಸ್ ಯಂತ್ರ ಅಳವಡಿಸಿದ್ದು, ಪ್ರಸ್ತುತ 25 ರೋಗಿಗಳು ಉಚಿತ ಚಿಕಿತ್ಸೆ ಪಡೆಯುತ್ತಿದ್ದಾರೆ ಎಂದು ಮಾಹಿತಿ ನೀಡಿದರು.

ಖಾಸಗಿ ಕಂಪನಿಯು ಮತ್ತಷ್ಟು ಯಂತ್ರ ಅಳವಡಿಸುವ ಭರವಸೆ ನೀಡಿದ್ದು, ಈಗಿರುವ ವ್ಯವಸ್ಥೆಯಡಿಯಲ್ಲಿ ಇನ್ನೂ ಹತ್ತು ರೋಗಿಗಳಿಗೆ ಉಚಿತ ಡಯಾಲಿಸಿಸ್ ಮಾಡಲು ಅವಕಾಶ ಕಲ್ಪಿಸಿಕೊಳ್ಳಲಾಗಿದೆ. ಮೂತ್ರಪಿಂಡದ ಸಮಸ್ಯೆ ಎದುರಿಸುತ್ತಿರುವ ರೋಗಿಗಳು ಇದರ ಪ್ರಯೋಜನ ಪಡೆದುಕೊಳ್ಳಬೇಕು ಎಂದು ಮನವಿ ಮಾಡಿದರು.

ಡಯಾಲಿಸಿಸ್ ಕೇಂದ್ರ ನಿರ್ವಹಣೆ ಮಾಡುತ್ತಿರುವ ಖಾಸಗಿ ಕಂಪನಿ ವ್ಯವಸ್ಥಾಪಕ ಪುಟ್ಟಪ್ಪ, ಜಿಲ್ಲಾ ಸಂಯೋಜಕ ರವಿ ಮತ್ತಿತರರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net