250 ಕ್ವಿಂಟಾಲ್ ಪಡಿತರ ಅಕ್ಕಿ ವಶ

21-hvr-15
Published on

ಹಾವೇರಿ: ನಗರದ ಗುತ್ತಲ ರಸ್ತೆಯಲ್ಲಿರುವ ಎಪಿಎಂಸಿ ಯಾರ್ಡ್​ನ ಮಳಿಗೆಯೊಂದರ ಮೇಲೆ ಸೋಮವಾರ ದಾಳಿ ನಡೆಸಿದ ಅಧಿಕಾರಿಗಳು ಅಕ್ರಮವಾಗಿ ದಾಸ್ತಾನು ಮಾಡಿದ್ದ 250 ಕ್ವಿಂಟಾಲ್ ಪಡಿತರ ಅಕ್ಕಿಯನ್ನು ವಶಪಡಿಸಿಕೊಂಡಿದ್ದಾರೆ. ಖಚಿತ ಮಾಹಿತಿ ಮೇರೆಗೆ ಉಮೇಶ ಚನ್ನಬಸಪ್ಪ ಮಳಿಮಠ ಎಂಬುವವರಿಗೆ ಸೇರಿದ ಮಳಿಗೆ ಮೇಲೆ ತಹಸೀಲ್ದಾರ್ ಶಂಕರ ಜಿ.ಎಸ್., ಹಾಗೂ ಆಹಾರ ಶಿರಸ್ತೇದಾರ್ ಯು.ಎನ್. ಸೂರಣಗಿ ನೇತೃತ್ವದಲ್ಲಿ ಆಹಾರ ಇಲಾಖೆ ಸಿಬ್ಬಂದಿ ದಾಳಿ ನಡೆಸಿದ ವೇಳೆ ಅಕ್ರಮವಾಗಿ ಸಂಗ್ರಹಿಸಿಟ್ಟಿದ್ದ ಪಡಿತರ ಅಕ್ಕಿ ಪತ್ತೆಯಾಗಿದೆ. ಈ ಕುರಿತು ಹಾವೇರಿ ಶಹರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net