25ರಂದು ಅಂಬೇಡ್ಕರ್ ಪ್ರತಿಮೆ ಅನಾವರಣ

Published on

ಚಾಮರಾಜನಗರ: ತಾಲೂಕಿನ ಹೆಬ್ಬಸೂರು ಗ್ರಾಮದಲ್ಲಿ ಜ.25 ರಂದು ಅಂಬೇಡ್ಕರ್ ಪ್ರತಿಮೆ ಅನಾವರಣ ಕಾರ್ಯಕ್ರಮ ಆಯೋಜಿಸಲಾಗಿದೆ. ಅಂದು ಬೆಳಗ್ಗೆ 11 ಗಂಟೆಗೆ ನಡೆಯಲಿರುವ ಕಾರ್ಯಕ್ರಮದ ಸಾನ್ನಿಧ್ಯವನ್ನು ಕೊಳ್ಳೇಗಾಲ ಚೇತವನ ಬುದ್ಧ ವಿಹಾರದ ಮನೋರಖ್ಖಿತ ಬಂತೇಜಿ ವಹಿಸುವರು.

ಮೈಸೂರಿನ ಉರಿಲಿಂಗಿ ಪೆದ್ದಿಮಠದ ಪೀಠಾಧ್ಯಕ್ಷ ಶ್ರೀಜ್ಞಾನಪ್ರಕಾಶ ಸ್ವಾಮೀಜಿ, ಸಮಾಜ ಕಲ್ಯಾಣ ಸಚಿವ ಡಾ. ಎಚ್.ಸಿ.ಮಹದೇವಪ್ಪ ಪ್ರತಿಮೆ ಅನಾವರಣಗೊಳಿಸುವರು. ಶಾಸಕ ಪುಟ್ಟರಂಗಶೆಟ್ಟಿ ಅಧ್ಯಕ್ಷತೆ ವಹಿಸುವರು. ಸಂಸದ ಸುನೀಲ್ ಬೋಸ್, ಶಾಸಕರಾದ ಎ.ಆರ್.ಕೃಷ್ಣಮೂರ್ತಿ, ದರ್ಶನ್ ಧ್ರುವನಾರಾಯಣ, ಎಚ್.ಎಸ್.ಗಣೇಶ್ ಪ್ರಸಾದ್, ಮುಡಾ ಮಾಜಿ ಅಧ್ಯಕ್ಷ ಎಚ್.ವಿ.ರಾಜೀವ್, ಜಿಲ್ಲಾ ಪಂಚಾಯಿತಿ ಮಾಜಿ ಸದಸ್ಯ ಎ.ಆರ್.ಬಾಲರಾಜ್ ಮುಖ್ಯ ಅತಿಥಿಗಳಾಗಿ ಭಾಗವಹಿಸುವರು. ಮೈಸೂರು ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಕೆ.ದೀಪಕ್ ಮುಖ್ಯ ಭಾಷಣ ಮಾಡುವರು ಎಂದು ಪ್ರಕಟಣೆ ತಿಳಿಸಿದೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net