

ಹುಬ್ಬಳ್ಳಿ: ಐಪಿಒ ಷೇರು ಮಾರುಕಟ್ಟೆಯಲ್ಲಿ ಹೂಡಿಕೆ ಮಾಡಿದರೆ ಲಾಭ ಗಳಿಸಬಹುದೆಂದು ನಂಬಿಸಿದ ವಂಚಕರು, ನಗರದ ವ್ಯಕ್ತಿಯೊಬ್ಬರಿಂದ ಬರೋಬ್ಬರಿ 26.50 ಲಕ್ಷ ರೂ. ವರ್ಗಾಯಿಸಿಕೊಂಡು ವಂಚಿಸಿದ್ದಾರೆ.
ಸಿ. ಜಗದೀಶ ಎಂಬುವವರು ವಂಚನೆಗೆ ಒಳಗಾಗಿದ್ದಾರೆ. ವಿಡಿಯೋ ಕಾಲ್ ಮೂಲಕ ಹೇಮಂಗ ಮೆಹ್ತಾ ಎಂದು ಪರಿಚಯಿಸಿಕೊಂಡ ಅಪರಿಚಿತ ವ್ಯಕ್ತಿ ಹೂಡಿಕೆ ಹೆಸರಿನಲ್ಲಿ 37.50 ಲಕ್ಷ ರೂ. ಹಣ ವರ್ಗಾಯಿಸಿಕೊಂಡಿದ್ದಾರೆ. ಮರಳಿ 11 ಲಕ್ಷ ರೂ. ಕೊಟ್ಟಿದ್ದಾರೆ. ಉಳಿದ 26.50 ಲಕ್ಷ ರೂ. ಕೊಡದೇ ವಂಚಿಸಿದ್ದಾರೆ ಎಂದು ದೂರಿನಲ್ಲಿ ಉಲ್ಲೇಖಿಸಲಾಗಿದೆ. ಸಿಇಎನ್ ಕ್ರೈಂ ಠಾಣೆಯಲ್ಲಿ ಪ್ರತ್ಯೇಕ ಪ್ರಕರಣ ದಾಖಲಾಗಿವೆ.