26 ರಂದು ನೇತ್ರ ತಪಾಸಣೆ ಉಚಿತ ಶಿಬಿರ

EYE CAMP NEW
Published on

ಚಿತ್ರದುರ್ಗ: ಆರೋಗ್ಯ ಇಲಾಖೆ, ಜಿಲ್ಲಾ ಅಂಧತ್ವ ನಿವಾರಣಾ ವಿಭಾಗ, ಜಿಲ್ಲಾಸ್ಪತ್ರೆ, ನಗರಸಭೆ ಹಾಗೂ ಶಿವಮೊಗ್ಗ ಶಂಕರ ಕಣ್ಣಿನ ಆಸ್ಪತ್ರೆ ಸಹಯೋಗದಲ್ಲಿ ಜೂ.26 ರಂದು ಬೆಳಗ್ಗೆ 9ರಿಂದ 4 ರವರೆಗೆ ನಗರದ ಡಾ.ಬಿ.ಆರ್. ಅಂಬೇಡ್ಕರ್ ಕಲ್ಯಾಣ ಮಂಟಪದಲ್ಲಿ ಬೃಹತ್ ಕಣ್ಣಿನ ತಪಾಸಣೆ, ಶಸ್ತ್ರ ಚಿಕಿತ್ಸೆ ಹಾಗೂ ಕನ್ನಡಕ ವಿತರಣಾ ಶಿಬಿರ ಹಮ್ಮಿಕೊಳ್ಳಲಾಗಿದೆ. ಶಾಸಕ ಕೆ.ಸಿ. ವೀರೇಂದ್ರಪಪ್ಪಿ ಉದ್ಘಾಟಿಸುವರು. ಹಿರಿಯ ನಟ ದೊಡ್ಡಣ್ಣ ಭಾಗವಹಿಸುವರು. ನಗರಸಭೆ ಅಧ್ಯಕ್ಷೆ ಬಿ.ಎನ್. ಸುಮಿತಾ ಅಧ್ಯಕ್ಷತೆ ವಹಿಸುವರು. ನಾನಾ ಗಣ್ಯರು ಕಾರ್ಯಕ್ರಮದಲ್ಲಿ ಪಾಲ್ಗೊಳ್ಳುವರು ಎಂದು ಪ್ರಕಟಣೆ ತಿಳಿಸಿದೆ.

----

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net