26 ರಂದು ನೇರ ಸಂದರ್ಶನ

interview
Published on

ಚಿತ್ರದುರ್ಗ: ಜಿಲ್ಲಾ ಉದ್ಯೋಗ ವಿನಿಮಯ ಕೇಂದ್ರದಲ್ಲಿ ಸೆ.26 ರಂದು ಬೆಳಗ್ಗೆ 10.30 ಕ್ಕೆ ನೇರ ನೇಮಕಕ್ಕೆ ಸಂದರ್ಶನ ಏರ್ಪಡಿಸಲಾಗಿದೆ. ಈ ಮೇಳದಲ್ಲಿ 3 ಕ್ಕೂ ಹೆಚ್ಚು ಖಾಸಗಿ ಕಂಪನಿಗಳು ಪಾಲ್ಗೊಳ್ಳಲಿವೆ. ಎಸ್ಸೆಸ್ಸೆಲ್ಸಿ, ಪಿಯುಸಿ, ಐಟಿಐ, ಡಿಪ್ಲೊಮಾ ಹಾಗೂ ಯಾವುದೇ ಪದವಿ ಪಡೆದ 18 ರಿಂದ 30 ವರ್ಷದೊಳಗಿನ ಪುರುಷ ಅಥವಾ ಮಹಿಳಾ ಅಭ್ಯರ್ಥಿಗಳು ಭಾಗವಹಿಸಬಹುದು. ಹೆಚ್ಚಿನ ಮಾಹಿತಿಗೆ ಜಿಲ್ಲಾ ಉದ್ಯೋಗ ವಿನಿಮಯ ಕೇಂದ್ರ ಕಚೇರಿ(7022459064)ಯನ್ನು ಸಂಪರ್ಕಿಸಬಹುದು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net