26 ರಿಂದ ರಾಜಭವನದ ಮುಂದೆ ಮಹಾಧರಣಿ

21ydg01
Published on


ಯಾದಗಿರಿ: ಕೇಂದ್ರ ಮತ್ತು ರಾಜ್ಯ ಸರಕಾರಗಳ ಜನವಿರೋಧಿ ನೀತಿ ಖಂಡಿಸಿ ನ.26 ರಿಂದ ದೇಶಾದ್ಯಂತ ಎಲ್ಲ ರಾಜಭವನಗಳ ಮುಂದೆ ಸಂಯುಕ್ತ ಕಿಸಾನ್ ಮೋರ್ಚಾ ಮತ್ತು ಕೇಂದ್ರ ಕಾರ್ಮಿಕ ಸಂಘಟನೆಗಳ ಜಂಟಿ ಆಶ್ರಯದಲ್ಲಿ ಬೃಹತ್ ಮಹಾಧರಣಿ ಆಯೋಜನೆ ಮಾಡಲಾಗಿದೆ ಎಂದು ಎಐಯುಟಿಯುಸಿ ಜಿಲ್ಲಾದ್ಯಕ್ಷೆ ಡಿ.ಉಮಾದೇವಿ ತಿಳಿಸಿದರು.

ದೆಹಲಿಯಲ್ಲಿ ಸತತ 13 ತಿಂಗಳ ಕಾಲ ರೈತರು ಐತಿಹಾಸಿಕ ಹೋರಾಟ ನಡೆಸಿದ ಪರಿಣಾಮ ಕೇಂದ್ರ ಸರಕಾರ ರೈತ ವಿರೋಧಿ ನೀತಿಗಳನ್ನು ವಾಪಸ್ ಪಡೆಯಿತು. ಆದರೂ ಕನಿಷ್ಠ ಬೆಂಬಲ ಬೆಲೆ ಕಾಯ್ದೆ ಜಾರಿ, ವಿದ್ಯುತ್ ತಿದ್ದುಪಡಿ ಮಸೂದೆ ರದ್ದತಿ ಮುಂತಾದ ವಿಷಯಗಳಲ್ಲಿ ರೈತರಿಗೆ ನೀಡಿದ ಲಿಖಿತ ಭರವಸೆ ಈಡೇರಿಸಿಲ್ಲ. ಬಿಜೆಪಿ ಮತ್ತು ಕಾಂಗ್ರೆಸ್ ಸರಕಾರಗಳು ಡಾ.ಸ್ವಾಮಿನಾಥನ್ ಆಯೋಗದ ವರದಿ ಜಾರಿಗೊಳಿಸುತ್ತಿಲ್ಲ. ಆಳುವ ಸರಕಾರಗಳು ರೈತರ ಮತ್ತು ಕಾಮರ್ಿಕರನ್ನು ಶೋಷಣೆಗೆ ಒಳಪಡಿಸಿವೆ ಎಂದು ಸುದ್ದಿಗೋಷ್ಠಿಯಲ್ಲಿ ಆಕ್ರೋಶ ವ್ಯಕ್ತಪಡಿಸಿದರು.

ಕಳೆದ ಒಂದು ದಶಕದಿಂದ ಕೇಂದ್ರದಲ್ಲಿ ಆಡಳಿತ ನಡೆಸುತ್ತಿರುವ ಎನ್.ಡಿ.ಎ ಸರಕಾರ ಆಕ್ರಮಣಕಾರಿಯಾಗಿ ರೂಪಿಸುತ್ತಿರುವ ಬಂಡವಾಳಶಾಹಿ ಹಾಗೂ ನವ ಉದಾರವಾದಿ ನೀತಿಗಳು ದೇಶದ ಜನರನ್ನು ಸಂಕಷ್ಟಕ್ಕೆ ದೂಡಿವೆ. ಪೆಟ್ರೋಲಿಯಂ ಉತ್ಪನ್ನ ಸೇರಿ ಬಹುತೇಕ ಸಾರ್ವಜನಿಕ ಸೇವೆಗಳ ಮೇಲೆ ಹೆಚ್ಚಿನ ತೆರಿಗೆ ವಿಧಿಸಿ ಶ್ರೀಸಾಮಾನ್ಯನ ಬದುಕು ಮೂರಾಬಟ್ಟೆ ಮಾಡಿವೆ. ಇದನ್ನು ಖಂಡಿಸಿ 72 ಗಂಟೆಗಳ ಬೃಹತ್ ಧರಣಿ ಆಯೋಜಿಸಲಾಗಿದೆ. ಬೆಂಗಳೂರಿನಲ್ಲಿ ನಡೆಯಲಿರುವ ಮುಷ್ಕರದಲ್ಲಿ ಜಿಲ್ಲೆಯಿಂದ ಸುಮಾರು 4 ಸಾವಿರ ಜನ ಪಾಲ್ಗೊಳ್ಳುವ ನಿರೀಕ್ಷೆ ಇದೆ ಎಂದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net