

ಘಟಪ್ರಭಾ: ಗಣೇಶವಾಡಿಯಲ್ಲಿ 1949ರಲ್ಲಿ ಆರಂಭವಾದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ಶಿಕ್ಷಣದ ಅರಿವು ಮೂಡಿಸುವ ಜತೆಗೆ ಸಹಸ್ರಾರು ಪ್ರತಿಭಾವಂತ ವಿದ್ಯಾರ್ಥಿಗಳನ್ನು ಸಮಾಜಕ್ಕೆ ನೀಡಿದೆ. ಇಂತಹ ಶಾಲೆ 75ನೇ ಸಂಭ್ರಮಾಚರಣೆ ಹೆಮ್ಮೆಯ ಸಂಗತಿ ಎಂದು ಶಾಸಕ ಬಾಲಚಂದ್ರ ಜಾರಕಿಹೊಳಿ ಹೇಳಿದರು.
ಸಮೀಪದ ಗಣೇಶವಾಡಿ ಗ್ರಾಮದಲ್ಲಿ ಮಂಗಳವಾರ ಹಮ್ಮಿಕೊಂಡಿದ್ದ ಸರ್ಕಾರಿ ಕನ್ನಡ ಹಿರಿಯ ಪ್ರಾಥಮಿಕ ಶಾಲೆಯ ವಜ್ರ ಮಹೋತ್ಸವ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿ, ಡಾ.ಬಾಬಾಸಾಹೇಬ್ ಅಂಬೇಡ್ಕರ್ ಪ್ರತಿಪಾದಿಸಿದ ಶಿಕ್ಷಣ, ಸಂಘಟನೆ, ಹೋರಾಟಗಳೆಂಬ ಸಿದ್ಧಾಂತ ಇಂದಿಗೂ ಪ್ರಸ್ತುತವಾಗಿವೆ. ಹೀಗಾಗಿ, ಶಿಕ್ಷಣದಿಂದ ಮಾತ್ರ ಉತ್ತಮ ಸಮಾಜ ನಿರ್ಮಾಣವಾಗಲು ಸಾಧ್ಯವಿದೆ.
ಗಣೇಶವಾಡಿ ಶಾಲೆಗೆ ಎರಡು ಕೊಠಡಿ ನಿರ್ಮಿಸಲಾವುದು. ಎಂದು ಭರವಸೆ ನೀಡಿದರು. ಅರಬಾವಿ ದುರದುಂಡೀಶ್ವರ ಮಠದ ಗುರು ಬಸವಲಿಂಗ ಸ್ವಾಮೀಜಿ, ಎಸ್‌ಡಿಎಂಸಿ ಅಧ್ಯಕ್ಷ ಅಪ್ಪಯ್ಯ ಮಾಳ್ಯಾಗೋಳ, ತಹಸೀಲ್ದಾರ್ ಡಾ.ಮೋಹನ ಭಸ್ಮೆ, ಬಿಇಒ ಅಜಿತ ಮನ್ನಿಕೇರಿ, ಪ್ರಭಾ ಶುಗರ್ಸ್ ನಿರ್ದೇಶಕ ಶಿವಲಿಂಗ ಪೂಜೇರಿ, ಮದನ ದೇಶಪಾಂಡೆ, ಕೆಂಚಪ್ಪ ಪಾಟೀಲ, ಹನುಮಂತರಾವ್ ದೇಶಪಾಂಡೆ, ಗ್ರಾಪಂ ಅಧ್ಯಕ್ಷ ನಾಗಪ್ಪ ಹೊರಟ್ಟಿ, ವಕೀಲ ಸುರೇಶ ಜಾಧವ, ಶ್ರೀಪತಿ ಗಣೇಶವಾಡಿ, ಸಿದ್ರಾಮ ಮೂಲಿಮನಿ, ರಮೇಶ ಪೂಜೇರಿ, ಯಲಗೌಡ ಪಾಟೀಲ, ಮುಖ್ಯಶಿಕ್ಷಕ ಆರ್.ಡಿ.ಪತ್ತಾರ, ಆರ್.ಕೆ.ಹಂದಿಗುಂದ ಇತರರಿದ್ದರು.