ಸುಪ್ತ ಪ್ರತಿಭೆಗಳು ಹೊರಬಲಿ

soundarya ambika college annual day
26ನೇ ವಾರ್ಷಿಕೋತ್ಸವ
Published on

ವಿಜಯವಾಣಿ ಸುದ್ದಿಜಾಲ ತ್ಯಾಮಗೊಂಡ್ಲು
ಪ್ರತಿಯೊಬ್ಬರಲ್ಲೂ ಪ್ರತಿಭೆ ಇದೆ. ವಿದ್ಯಾರ್ಥಿಗಳು ಪ್ರತಿಭೆಯನ್ನು ವಾರ್ಷಿಕೋತ್ಸವದಂತಹ ವೇದಿಕೆಗಳಲ್ಲಿ ಪ್ರದರ್ಶಿಸಬೇಕು ಎಂದು ಸೌಂದರ್ಯ ಅಂಬಿಕ ಸಮೂಹ ವಿದ್ಯಾಸಂಸ್ಥೆಗಳ ಅಧ್ಯಕ್ಷ ಸೌಂದರ್ಯ ರಮೇಶ್ ಹೇಳಿದರು.
ತ್ಯಾಮಗೊಂಡ್ಲು ಸೌಂದರ್ಯ ಸಮೂಹ ವಿದ್ಯಾಸಂಸ್ಥೆಯ ಅಂಬಿಕಾ ನರ್ಸಿಂಗ್ ಮತ್ತು ಪ್ಯಾರಾಮೆಡಿಕಲ್ ವಿದ್ಯಾಸಂಸ್ಥೆಯಲ್ಲಿ ಶನಿವಾರ ಹಮ್ಮಿಕೊಂಡಿದ್ದ 26ನೇ ವಾರ್ಷಿಕೋತ್ಸವದಲ್ಲಿ ಮಾತನಾಡಿದರು.
ವಿದ್ಯಾರ್ಥಿಗಳ ಸರ್ವತೋಮುಖ ಬೆಳವಣಿಗೆಗೆ ಸಂಸ್ಥೆ ಶ್ರಮಿಸುತ್ತಿದ್ದು, ಗುಣಮಟ್ಟದ ಶಿಕ್ಷಣ ನೀಡಲಾಗುತ್ತಿದೆ ಎಂದರು.
ಅಂಬಿಕಾ ವಿದ್ಯಾಸಂಸ್ಥೆ ಕಾರ್ಯದರ್ಶಿ ಭರತ್ ಸೌಂದರ್ಯ ಮಾತನಾಡಿ, ರೋಗಿಗಳನ್ನು ಆರೈಕೆ ಮಾಡುವಾಗ ಅವರ ಸಮಸ್ಯೆಯನ್ನು ಗುರುತಿಸಿ ಮಾನವೀಯ ನೆಲೆಗಟ್ಟಿನಲ್ಲಿ ನಸಿರ್ಂಗ್ ವಿದ್ಯಾರ್ಥಿಗಳು ಸೇವೆ ಮಾಡಬೇಕು. ವಿದ್ಯಾರ್ಥಿಗಳು ಉತ್ತಮ ಕೌಶಲಗಳನ್ನು ಬೆಳೆಸಿಕೊಳ್ಳಬೇಕು. ನಸಿರ್ಂಗ್ ಕ್ಷೇತ್ರದಲ್ಲಿ ಕಲಿಕೆಗೆ ಯಾವುದೆ ಕೊನೆಯಿಲ್ಲ ಹಾಗೂ ವಿದ್ಯಾರ್ಥಿಗಳಿಗೆ ಪ್ರೀತಿಯ ಒಲವು ಸೇರಿಸಿ ರೋಗಿಗಳ ಸೇವೆ ಮಾಡಬೇಕು ಎಂದು ಸಲಹೆ ನೀಡಿದರು.
ಪ್ರಸ್ತುತ ಆರೋಗ್ಯದ ಕ್ಷೇತ್ರದಲ್ಲಿ ಬದಲಾವಣೆಯಾಗುತ್ತಿದ್ದು, ವೃತ್ತಿಪರದಲ್ಲಿ ನರ್ಸಿಂಗ್ ಕ್ಷೇತ್ರ ಉತ್ತಮವಾಗಿದೆ.
ನಸಿರ್ಂಗ್ ವಿದ್ಯಾರ್ಥಿಗಳು ಉತ್ತಮ ಶುಶ್ರೂಷಕರಾಗಲು ಅಗತ್ಯವಾದ ಗುಣಗಳನ್ನು ಬೆಳೆಸಿಕೊಳ್ಳಬೇಕು, ವಿದ್ಯಾರ್ಥಿಗಳು ಜೀವನದಲ್ಲಿ ಲಭಿಸುವ ಅವಕಾಶಗಳನ್ನು ಸದ್ಭಳಕೆ ಮಾಡಿಕೊಂಡು, ವೃತ್ತಿ ಜೀವನದಲ್ಲಿ ಸೇವಾ ಮನೋಭಾವದಿಂದ ಕಾರ್ಯನಿರ್ವಹಿಸಬೇಕು. ಇಂದಿನ ಯುಗದಲ್ಲಿ ವೈದ್ಯಕೀಯ ಕ್ಷೇತ್ರದಲ್ಲಿ ಆಗುತ್ತಿರುವ ತೀವ್ರಗತಿಯ ತಾಂತ್ರಿಕ ಬದಲಾವಣೆ ಹಾಗೂ ವೈದ್ಯಕೀಯ ಉಪಕರಣಗಳ ಬದಲಾವಣೆಗಳನ್ನು ದಿನನಿತ್ಯದ ಕೆಲಸ, ಕಾರ್ಯಗಳನ್ನು ಅಳವಡಿಸಿಕೊಳ್ಳಲು ಸಿದ್ಧರಿರಬೇಕು ಎಂದು ತಿಳಿಸಿದರು.
ಗಿನ್ನಿಸ್ ದಾಖಲೆ ಮಾಡಿರುವ ಅಭೀಶ್ ಪಿ.ಡಾಮಿನಿಕ್ ಅವರಿಂದ ಸಾಹಸ ಪ್ರದರ್ಶನ, ವಿದ್ಯಾರ್ಥಿಗಳಿಗೆ ಬಹುಮಾನ ವಿತರಣೆ, ಸಾಂಸ್ಕೃತಿಕ ಕಾರ್ಯಕ್ರಮಗಳು, ವಯನಾಡಿನ ಎಂಟಿಬಿ ತಂಡದಿಂದ ಸಂಗೀತ ಕಾರ್ಯಕ್ರಮ ನಡೆಯಿತು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net