26ರಂದು ಮತ ಎಣಿಕೆ

CTD 7 DC-04
Published on

ಚಿತ್ರದುರ್ಗ:ಮೊಳಕಾಲ್ಮೂರು ತಾಲೂಕು ಜಹಗೀರ್‌ಬುಡ್ಡೇನಹಳ್ಳಿ,ಚಳ್ಳಕೆರೆ ತಾಲೂಕಿನ ಮಲ್ಲೂರಹಳ್ಳಿ,ಚಿತ್ರದುರ್ಗ ತಾಲೂಕು ಕೂ ನಬೇವು ಗ್ರಾಪಂಗಳ ತಲಾ ಒಂದು ಸದಸ್ಯ ಸ್ಥಾನಗಳಿಗೆ ನಡೆದ ಉಪಚುನಾವಣೆಯ ಮತ ಎಣಿಕೆ ಜುಲೈ 26ರಂದು ಆಯಾ ತಾಲೂಕು ಕೇಂದ್ರಗಳಲ್ಲಿ ನಡೆಯಲಿದೆ.

ಈ ಹಿನ್ನಲೆಯಲ್ಲಿ ಅಂದು ಬೆಳಗ್ಗೆ 6ರಿಂದ ಗುರುವಾರ ಬೆಳಗ್ಗೆ 6ಗಂಟೆವರೆಗೆ ಮತ ಎಣಿಕೆ ಕೇಂದ್ರದ ಸುತ್ತ ಹಾ ಗೂ ಗ್ರಾಪಂ ಕ್ಷೇತ್ರಗಳ ವ್ಯಾಪ್ತಿಗೆ ಅನ್ವಯಿಸುವಂತೆ ನಿಷೇಧಾಜ್ಞೆ ಜಾರಿಗೊಳಿಸಿ ಜಿಲ್ಲಾಧಿಕಾರಿ ಜಿಆರ್‌ಜೆ ದಿವ್ಯಾಪ್ರಭು ಅವರು ಆದೇಶಿಸಿ ದ್ದಾರೆ. ಮತ ಎಣಿಕೆ ಕೇಂದ್ರಗಳಲ್ಲಿ ಮೊಬೈಲ್ ಸೇರಿದಂತೆ ಯಾವುದೇ ಎಲೆಕ್ಟ್ರಾನಿಕ್ ಉಪಕರಣಗಳಿಗೆ ಅವಕಾಶವಿಲ್ಲವೆಂದು ಅವರು ತಿಳಿಸಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net