26ರಂದು ಹುತಾತ್ಮ ಯೋಧರ ಸವಿನೆನಪು

ede18f64-45d7-4b00-a2d2-76680d693f84
Published on

ಮೈಸೂರು: ಕರ್ನಾಟಕ ರಾಜ್ಯ ಮಾನವ ಹಕ್ಕುಗಳ ರಕ್ಷಣಾ ಸಮಿತಿ ವತಿಯಿಂದ ಸಂವಿಧಾನ ಸಮರ್ಪಣಾ ದಿನ, ಕನ್ನಡ ರಾಜ್ಯೋತ್ಸವ, ಹುತಾತ್ಮ ಯೋಧರ ಸವಿನೆನಪು ಕಾರ್ಯಕ್ರಮವನ್ನು ನ. 26ರಂದು ಬೆಳಗ್ಗೆ 11.30ಕ್ಕೆ ನಗರದ ಪುರಭವನದಲ್ಲಿ ಆಯೋಜಿಸಲಾಗಿದೆ.

ಹುತಾತ್ಮ ಯೋಧರ ತಾಯಿಂದಿರು ಮತ್ತು ಮಡದಿಗೆ ಗೌರವ ಸಮರ್ಪಣೆ ಮಾಡಲಾಗುವುದು. ಹಿರಿಯ ಸಿವಿಲ್ ನ್ಯಾಯಾಧೀಶ ದೇವರಾಜ ಭೂತೆ ಕಾರ್ಯಕ್ರಮ ಉದ್ಘಾಟಿಸುವರು. ನಿವೃತ್ತ ಐಜಿಪಿ ಅರ್ಕೇಶ್‌ಗೌಡ, ಆರ್‌ಪಿಐ ರಾಷ್ಟ್ರೀಯ ಕಾರ್ಯಾಧ್ಯಕ್ಷ ವೆಂಕಟಸ್ವಾಮಿ, ಜಿಲ್ಲಾ ಪಂಚಾಯಿತಿ ಉಪ ಕಾರ್ಯದರ್ಶಿ ಪ್ರೇಮ್‌ಕುಮಾರ್ ಇನ್ನಿತರರು ಭಾಗವಹಿಸುವರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net