

ಚಿತ್ರದುರ್ಗ: ಸಮನ್ವಯದಿಂದ ಕಾರ್ಯ ನಿರ್ವಹಿಸುವ ಮೂಲಕ ಯಾವುದೇ ಲೋಪದೋಷಗಳಿಗೆ ಅವಕಾಶ ನೀಡದೇ ಜಿಲ್ಲೆಯಲ್ಲಿ ಅಚ್ಚುಕಟ್ಟಾಗಿ ಪರೀಕ್ಷಾ ಕಾರ‌್ಯವನ್ನು ನಿರ್ವಹಿಸಬೇಕೆಂದು ಜಿಲ್ಲಾಧಿಕಾರಿ ಟಿ.ವೆಂಕಟೇಶ್ ಎಸ್‌ಎಸ್‌ಎಲ್‌ಸಿ ಪರೀಕ್ಷೆಗೆ(2)ನಿಯೋಜಿಸಿದ ಅಧಿಕಾರಿಗಳು ಹಾ ಗೂ ಸಿಬ್ಬಂದಿಗೆ ಸೂಚಿಸಿದರು. ಡಿಸಿ ಕಚೇರಿಯಲ್ಲಿ ಬುಧವಾರ ನಡೆದ ಪೂರ್ವ ಸಿದ್ಧತೆ ಸಭೆಯಲ್ಲಿ ಮಾತನಾಡಿ,ಪರೀಕ್ಷಾ ಮಾರ್ಗದರ್ಶಿ ನಿ ಯಮಗಳನ್ನು ಕಡ್ಡಾಯವಾಗಿ ಪಾಲಿಸಬೇಕು. ಪ್ರಶ್ನೆ ಪತ್ರಿಕೆಗಳನ್ನಿಡುವ ತಾಲೂಕು ಖಜಾನೆಗಳಿಗೆ ಹೆಚ್ಚಿನ ಬಂದೋಬಸ್ತ್ ಕಲ್ಪಿಸಬೇಕು. ಪ ರೀಕ್ಷೆ ಪಾವಿತ್ರೃತೆ ಕಾಪಾಡಲು ವೆಬ್‌ಕಾಸ್ಟಿಂಗ್ ಘಟಕ ವ್ಯವಸ್ಥಿತವಾಗಿ ಕಾರ್ಯನಿರ್ವಹಿಸ ಬೇಕೆಂದರು.
28 ಪರೀಕ್ಷಾ ಕೇಂದ್ರ 7902 ವಿದ್ಯಾರ್ಥಿಗಳು
ಮೇ 26ರಿಂದ ಜೂನ್ 2ರವರೆಗೆ ಪರೀಕ್ಷೆ ನಡೆಯಲಿದೆ. 26ರಂದು ಪ್ರಥಮ ಭಾಷೆ, 27ರಂದು ಗಣಿತ,28ರಂದು ಇಂಗ್ಲೀಷ್,29ರ ಂದು ಸಮಾಜ ವಿಜ್ಞಾನ,30ರಂದು ಹಿಂದಿ, 31ರಂದು ವಿಜ್ಞಾನ ವಿಷಯದ ಪರೀಕ್ಷೆ ನಡೆಯಲಿದೆ ಎಂದು ಡಿಡಿಪಿಐ ಎಂ.ಆರ್.ಮಂಜು ನಾಥ್ ತಿಳಿಸಿದರು. ಜಿಲ್ಲೆಯಲ್ಲಿ ಈ ಪರೀಕ್ಷೆಗೆ 7902 ವಿದ್ಯಾರ್ಥಿಗಳು ನೋಂದಣಿಯಾಗಿದ್ದು,28 ಪರೀಕ್ಷಾ ಕೇಂದ್ರಗಳನ್ನು ಸ್ಥಾಪಿಸಲಾಗಿದೆ. ಎಲ್ಲ ಕೇಂದ್ರಗಳಿಗೆ ಮುಖ್ಯಅಧೀಕ್ಷಕರು ಮತ್ತು ಕಸ್ಟೋಡಿಯನ್‌ಗಳನ್ನು ನೇಮಕ ಮಾಡಲಾಗಿದೆ ಎಂದರು.
4 ರಿಂದ 5 ಕೇಂದ್ರಗಳಿಗೆ ಒಬ್ಬರಂತೆ ಜಿಲ್ಲಾ ಹಂತ, ತಾಲೂಕು ಹಂತದ ಅಧಿಕಾರಿಗಳನ್ನು ವೀಕ್ಷಕರನ್ನಾಗಿ ನೇಮಕ ಮಾಡಬೇಕು.ಪರೀಕ್ಷೆ ನಡೆಯು ವ ದಿನಗಳಂದು ಕೇಂದ್ರಗಳ ಸುತ್ತ 200 ಮೀಟರ್ ಪ್ರದೇಶವನ್ನು 144 ಸೆಕ್ಷನ್ ಪ್ರಕಾರ ನಿಷೇಧಿತ ಪ್ರದೇಶ ಎಂದು ಘೋಷಿಸು ವಂತೆ ಜಿಲ್ಲಾಧಿಕಾರಿಗೆ ಮನವಿ ಮಾಡಿದರು. ಜಿಪಂ ಸಿಇಒ ಎಸ್.ಜೆ.ಸೋಮಶೇಖರ್,ಶಿಕ್ಷಣಾಧಿಕಾರಿ ಸಿದ್ದಪ್ಪ, ಡಿವೈಎಸ್‌ಪಿ ದಿನಕರ್ ಮತ್ತಿತರರು ಇದ್ದರು.