

ನುಗ್ಗೇಹಳ್ಳಿ: ಬಾಳೆಹೊನ್ನೂರು ಶ್ರೀಮದ್ ರಂಭಾಪುರಿ ಜಗದ್ಗುರುಗಳ ಶರನ್ನವ ರಾತ್ರಿ ದಸರಾ ಧರ್ಮ ಸಮ್ಮೇಳನವನ್ನು ಸೆ.26ರಿಂದ ಅಕ್ಟೋಬರ್ 5ರವರೆಗೆ ಬೇಲೂರಿನಲ್ಲಿ ಹಮ್ಮಿಕೊಳ್ಳಲಾಗಿದೆ ಎಂದು ತಾಲೂಕು ಅಖಿಲ ಭಾರತ ವೀರಶೈವ ಲಿಂಗಾಯತ ಮಹಾಸಭಾ ಅಧ್ಯಕ್ಷ ಪರಮೇಶ್ ತಿಳಿಸಿದರು.
ಬಸವೇಶ್ವರ ಸ್ವಾಮಿ ಕಲ್ಯಾಣ ಮಂಟಪದಲ್ಲಿ ಆಯೋಜಿಸಿದ್ದ ಆಹ್ವಾನ ಪತ್ರಿಕೆ ವಿತರಣಾ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಬೇಲೂರಿನ ಸರ್ಕಾರಿ ಜೂನಿಯರ್ ಕಾಲೇಜು ಆವರಣದಲ್ಲಿ ವಿವಿಧ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗಿದೆ. ಸಮಾಜದವರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಬೇಕೆಂದು ಮನವಿ ಮಾಡಿದರು.
ಬೇಲೂರು ತಾಲೂಕು ಅಖಿಲ ಭಾರತ ವೀರಶೈವ ಮಹಾಸಭಾ ಅಧ್ಯಕ್ಷ ರವಿಕುಮಾರ್ ಮಾತನಾಡಿ, ದಸರಾ ಧರ್ಮ ಸಮ್ಮೇಳನಕ್ಕೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ, ಪುಷ್ಪಗಿರಿ ಮಠದ ಶ್ರೀ ಸೋಮಶೇಖರ ಶಿವಾಚಾರ್ಯ ಸ್ವಾಮೀಜಿ, ಸಚಿವ ಕೆ.ಗೋಪಾಲಯ್ಯ ಆಗಮಿಸಲಿದ್ದಾರೆ. ಶಾಸಕ ಕೆ.ಎಸ್.ಲಿಂಗೇಶ್ ಅಧ್ಯಕ್ಷತೆ ವಹಿಸಲಿದ್ದಾರೆ. ಅಲ್ಲದೆ, ಕೃಷಿ ವಸ್ತುಪ್ರದರ್ಶನವನ್ನು ಆಯೋಜಿಸಲಾಗಿದೆ ಎಂದು ತಿಳಿಸಿದರು.
ಕಾರ್ಯದರ್ಶಿ ದಿನೇಶ್, ದಯಾನಂದ್, ರುದ್ರಸ್ವಾಮಿ, ಸಿದ್ದಪ್ಪ, ಎನ್.ಎಸ್.ಗಿರೀಶ್, ವಿಶ್ವನಾಥ್, ಎನ್.ಆರ್.ಕೃಪಾಶಂಕರ್, ಜಯಕೀರ್ತಿ, ಸತೀಶ್, ಚಿರಂಜೀವಿ, ನ್ನೇಗೌಡ, ಎನ್.ಸಿ.ಕುಮಾರ್, ಎನ್.ಎನ್.ಮನು, ರೇಣುಕಪ್ಪ, ಎಂ.ಜಿ.ಗಿರೀಶ್, ಮಂಜು ಹಾಜರಿದ್ದರು.