26ರಿಂದ ಪಾರಂಪರಿಕ ವೈದ್ಯರ ರಾಜ್ಯ ಸಮ್ಮೇಳನ

Basavanagidevaswamiji
Published on

ಚಿತ್ರದುರ್ಗ: ಮಂಡ್ಯ ಜಿಲ್ಲೆ ನಾಗಮಂಗಲ ತಾಲೂಕಿನ ಆದಿಚುಂಚನಗಿರಿ ಮಹಾಸಂಸ್ಥಾನ ಮಠದಲ್ಲಿ ಅ. 26ರಿಂದ 28ರವರೆಗೂ ಪಾರಂಪರಿಕ ವೈದ್ಯರ 14ನೇ ರಾಜ್ಯ ಸಮ್ಮೇಳನ ಹಮ್ಮಿಕೊಳ್ಳಲಾಗಿದೆ ಎಂದು ಶ್ರೀ ಬಸವನಾಗಿದೇವ ಸ್ವಾಮೀಜಿ ಹೇಳಿದರು.

ಗುರುವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಸಮ್ಮೇಳನ ಉದ್ಘಾಟಿಸುವರು. ಡಾ.ನಿರ್ಮಲಾನಂದನಾಥ ಸ್ವಾಮೀಜಿ, ಪ್ರಸನ್ನನಾಥ ಸ್ವಾಮೀಜಿ ಸಾನಿಧ್ಯ ವಹಿಸುವರು. ಪಾರಂಪರಿಕ ವೈದ್ಯ ಪರಿಷತ್ ರಾಜ್ಯ ಅಧ್ಯಕ್ಷ ಜಿ.ಮಹದೇವಯ್ಯ ಅಧ್ಯಕ್ಷತೆ ವಹಿಸಲಿದ್ದಾರೆ ಎಂದರು.

ಮೂರು ದಿನ ನಡೆಯಲಿರುವ ಸಮ್ಮೇಳನದಲ್ಲಿ ಕರೋನಾದಂತ ಸಾಂಕ್ರಾಮಿಕ ರೋಗಗಳು, ಜ್ವರ, ಸ್ತ್ರೀ ರೋಗ, ಸಂದಿವಾತ, ಚರ್ಮರೋಗ, ಮಧುಮೇಹ ಇತರ ರೋಗಗಳ ಕುರಿತು ಗೋಷ್ಠಿಗಳು ನಡೆಯಲಿವೆ. ಐವರು ಪಾರಂಪರಿಕ ವೈದ್ಯರಿಗೆ ಪಾರಂಪರಿಕ ವೈದ್ಯ ರತ್ನ ಪ್ರಶಸ್ತಿ ನೀಡಿ ಸನ್ಮಾನಿಸಲಾಗುವುದು ಎಂದು ಮಾಹಿತಿ ನೀಡಿದರು.

ಪಾರಂಪರಿಕ ವೈದ್ಯ ಪದ್ಧತಿ ಐತಿಹಾಸಿಕ ಪರಂಪರೆ ಹೊಂದಿದ್ದು, ಎಂಬಿಬಿಎಸ್ ವೈದ್ಯಕೀಯ ವ್ಯವಸ್ಥೆ ಇಲ್ಲದ ಕಾಲಘಟ್ಟದಲ್ಲಿ ಅನೇಕ ದೊಡ್ಡ ಕಾಯಿಲೆಗಳನ್ನು ಗುಣಪಡಿಸಲು ಸಹಕಾರಿಯಾಗಿತ್ತು. ಪ್ರಸ್ತುತ ದಿನಗಳಲ್ಲಿ ಕೇಂದ್ರ ಮತ್ತು ರಾಜ್ಯ ಸರ್ಕಾರ ಪ್ರೋತ್ಸಾಹಿಸದೆ, ನಿರ್ಲಕ್ಷೃ ತೋರಿದ್ದು, ನಶಿಸಿ ಹೋಗುತ್ತಿರುವ ಕಾರಣ ಸಮ್ಮೇಳನದಲ್ಲಿ ಚರ್ಚಿಸಲಾಗುವುದು ಎಂದು ತಿಳಿಸಿದರು.

ಪರಿಷತ್ ಸಂಚಾಲಕ ವೀರಣ್ಣ, ವೈದ್ಯ ಮೊಹಿದ್ದೀನ್ ಇದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net