

ಚಿತ್ರದುರ್ಗ:ಲೋಕಾಯುಕ್ತ ಚಿತ್ರದುರ್ಗ ವಿಭಾಗದ ಅಧಿಕಾರಿಗಳು ಜಿಲ್ಲೆಯ ಎಲ್ಲ ತಾಲೂಕುಗಳಿಗೆ ಭೇಟಿ ನೀಡಿ ಸಾರ್ವಜನಿಕರಿಂದ ದೂರು ಅಹವಾಲು ಸ್ವೀಕರಿಸಲಿದ್ದಾರೆ.ಲೋಕಾಯುಕ್ತ ಪೊಲೀಸ್ ನಿರೀಕ್ಷಕರು ಮೇ26ರಂದು ಬೆಳಿಗ್ಗೆ 10.30 ರಿಂದ ಮಧ್ಯಾಹ್ನ 1.30ರವ ರೆಗೆ ಹಿರಿಯೂರು ನಗರಸಭೆಯಲ್ಲಿ,ಅದೇ ದಿನ ಬೆಳಗ್ಗೆ 10ರಿಂದ ಮಧ್ಯಾಹ್ನ 1.30ರವರೆಗೆ ಮೊಳಕಾಲ್ಮೂರು ಪಪಂನಲ್ಲಿ ಹಾಗೂ ಮಧ್ಯಾ ಹ್ನ 2.30 ರಿಂದ ಸಂಜೆ 5.30 ರವರೆಗೆ ಚಳ್ಳಕೆರೆ ನಗರಸಭೆಯಲ್ಲಿ ಪೊಲೀಸ್ ನಿರೀಕ್ಷಕರು-2 ಹಾಜರಿದ್ದು,ಸಾರ್ವಜನಿಕರಿಂದ ದೂರು, ಅಹವಾಲು ಸ್ವೀಕರಿಸುವರು. ಡಿವೈಎಸ್‌ಪಿ 27ರಂದು ಬೆಳಗ್ಗೆ 10.30 ರಿಂದ ಮಧ್ಯಾಹ್ನ 1.30 ರವರೆಗೆ ಚಿತ್ರದುರ್ಗ ನಗರಸಭೆಯಲ್ಲಿ, ಅದೇ ದಿನ ಬೆಳಗ್ಗೆ 10ರಿಂದ ಮಧ್ಯಾಹ್ನ 1.30ರವರೆಗೆ ಹೊಸದುರ್ಗ ಪುರಸಭೆ ಹಾಗೂ ಮಧ್ಯಾಹ್ನ 2.30 ರಿಂದ ಸಂಜೆ 5.30 ರವರೆಗೆ ಹೊಳಲ್ಕೆರೆ ಪುರಸಭೆಯಲ್ಲಿ ಪೊಲೀಸ್ ನಿರೀಕ್ಷಕರು-3 ಹಾಜರಿದ್ದು ಸಾರ್ವಜನಿಕರಿಂದ ದೂರು, ಅಹವಾಲುಗಳನ್ನು ಸ್ವೀಕರಿಸಲಿದ್ದಾರೆ ಎಂದು ಲೋಕಾಯುಕ್ತ ಎಸ್‌ಪಿ ಎನ್.ವಾಸುದೇವರಾಮ ತಿಳಿಸಿದ್ದಾರೆ.