27 ಲಕ್ಷಕ್ಕೂ ಹೆಚ್ಚು ಮತದಾರರ ಹೆಸರು ನಾಪತ್ತೆ: ಎಸ್ ಡಿಪಿಐ ಆರೋಪ

Published on

ಮೈಸೂರು: ರಾಜ್ಯಾದ್ಯಂತ 27 ಲಕ್ಷಕ್ಕೂ ಹೆಚ್ಚಿನ ಮತದಾರರನ್ನು ಪಟ್ಟಿಯಿಂದ ಕೈ ಬಿಡಲಾಗಿದೆ ಎಂದು ಎಸ್‌ಡಿಪಿಐ ರಾಜ್ಯಾಧ್ಯಕ್ಷ ಅಬ್ದುಲ್ ಮಜೀದ್ ಆರೋಪಿಸಿದರು.
ಹಿಂದೆ ತಾಂತ್ರಿಕ ಸಮಸ್ಯೆ, ಬೂತ್ ಮಟ್ಟದ ಚುನಾವಣಾಧಿಕಾರಿಗಳ ನಿರ್ಲಕ್ಷ್ಯ, ಇಲ್ಲವೇ ಕಣ್ತಪ್ಪಿನಿಂದ ಮತದಾರರ ಪಟ್ಟಿಯಿಂದ ಹೆಸರು ನಾಪತ್ತೆಯಾಗುತ್ತಿತ್ತು. ಆದರೀಗ ಬಿಜೆಪಿ ಸೋಲಿನ ಭೀತಿಯಿಂದ ಒಂದು ನಿರ್ದಿಷ್ಟ ಸಮುದಾಯದ ಮತದಾರರ ಹೆಸರನ್ನು ಉದ್ದೇಶಪೂರ್ವಕವಾಗಿ ಕೈಬಿಟ್ಟಿದೆ ಎಂದು ಸೋಮವಾರ ಸುದ್ದಿಗೋಷ್ಠಿಯಲ್ಲಿ ದೂರಿದರು.
ಮೈಸೂರು ಜಿಲ್ಲೆಯಲ್ಲಿಯೂ 1,45,908 ಮತದಾರರ ಹೆಸರನ್ನು ಪಟ್ಟಿಯಿಂದ ಕೈಬಿಡಲಾಗಿದೆ ಎನ್ನುವ ದೂರಿದೆ. ಈ ಪ್ರಕರಣದಲ್ಲಿ ರಾಜ್ಯ ಬಿಜೆಪಿ ಸರ್ಕಾರದ ಪ್ರಭಾವಿ ಮಂತ್ರಿಯೊಬ್ಬರು ಭಾಗಿಯಾಗಿರುವ ಬಗ್ಗೆ ಸಚಿವರಿಗೆ ಸಂಬಂಧಿಸಿದ ಚೆಕ್ ದೊರೆತಿರುವುದೇ ಸಾಕ್ಷಿಯಾಗಿದೆ. ಹೀಗಾಗಿ ಈ ಪ್ರಕರಣವನ್ನು ಚುನಾವಣಾ ಆಯೋಗ ಗಂಭೀರವಾಗಿ ಪರಿಗಣಿಸಿ ನ್ಯಾಯಾಧೀಶರಿಂದ ತನಿಖೆ ನಡೆಸಬೇಕು. ತಪ್ಪಿತಸ್ಥರನ್ನು ಶಿಕ್ಷಿಸಬೇಕು ಎಂದು ಒತ್ತಾಯಿಸಿದರು.
ಮುಖಂಡರಾದ ದೇವನೂರು ಪುಟ್ಟನಂಜಯ್ಯ, ರಫತುಲ್ಲಾಖಾನ್, ಎಸ್. ಸ್ವಾಮಿ, ಅಮ್ಜದ್‌ಖಾನ್ ಇತರರು ಇದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net