

ಬಸವಕಲ್ಯಾಣ: ಶಿಕ್ಷಣವನ್ನು ಸವಾಲಾಗಿ ಸ್ವೀಕರಿಸಿ, ಉನ್ನತ ಶಿಕ್ಷಣ ಪಡೆದು ಆರ್ಥಿಕ ಪ್ರಗತಿಗೆ ಸಾಧಿಸಬೇಕು ಎಂದು ದಲಿತ ಸಂಘರ್ಷ ಸಮಿತಿ ರಾಜ್ಯ ಸಂಚಾಲಕ ಡಾ.ಡಿ.ಜಿ.ಸಾಗರ ಸಲಹೆ ನೀಡಿದರು.
ಸೈದಾಪುರ ಗ್ರಾಮದಲ್ಲಿ ಸೋಮವಾರ ಸಂಜೆ ಸಂವಿಧಾನ ಶಿಲ್ಪಿ, ಭಾರತ ರತ್ನ ಡಾ.ಅಂಬೇಡ್ಕರ್ ಮೂರ್ತಿ ಲೋಕಾರ್ಪಣೆಗೊಳಿಸಿ ಮಾತನಾಡಿದ ಅವರು, ಬುದ್ಧ, ಬಸವ, ಡಾ.ಅಂಬೇಡ್ಕರ್ ಅವರ ತತ್ವ, ಸಂದೇಶಗಳನ್ನು ಅರಿತು ಜೀವನದಲ್ಲಿ ಅಳವಡಿಸಿಕೊಳ್ಳಬೇಕು. ಅವರು ತೋರಿದ ಮಾರ್ಗದಲ್ಲಿ ಎಲ್ಲರೂ ನಡೆಯಬೇಕು ಎಂದರು.
ಗ್ರಾಮಗಳಲ್ಲಿ ಡಾ.ಅಂಬೇಡ್ಕರ್ ಪ್ರತಿಮೆ ಸ್ಥಾಪಿಸುವ ಜತೆಗೆ ವ್ಯವಸ್ಥಿತವಾದ ಗ್ರಂಥಾಲಯ ಆರಂಭಿಸಬೇಕು. ಇದರಿಂದ ಓದಿ ಜ್ಞಾನ ವೃದ್ಧಿಸಿಕೊಳ್ಳಲು ಅನುಕೂಲವಾಗುತ್ತದೆ. ಸಂಘಟನೆಯಿಂದ ಸಮಾಜಪರ ಕಾರ್ಯ ಚಟುವಟಿಕೆಗಳನ್ನು ನಡೆಸುವ ಜತೆಗೆ ಅನ್ಯಾಯದ ವಿರುದ್ಧ ಧ್ವನಿ ಎತ್ತಬೇಕು ಎಂದು ಹೇಳಿದರು.
ಅಧ್ಯಕ್ಷತೆ ವಹಿಸಿದ್ದ ಶಾಸಕ ಶರಣು ಸಲಗರ ಮಾತನಾಡಿ, ಡಾ.ಬಾಬಾಸಾಹೇಬ್ ಅಂಬೇಡ್ಕರ್ ತೋರಿದ ದಾರಿಯಲ್ಲಿ ಎಲ್ಲರೂ ನಡೆಯಬೇಕು. ಶಿಕ್ಷಣದಿಂದ ಮಾತ್ರ ಸಮಾಜದ ಪ್ರಗತಿ ಸಾಧ್ಯ. ಮಕ್ಕಳಿಗೆ ಗುಣಮಟ್ಟದ ಶಿಕ್ಷಣ ನೀಡುವಲ್ಲಿ ಪಾಲಕರು ಕಾಳಜಿ ವಹಿಸಬೇಕು ಎಂದರು.
ಸಾನ್ನಿಧ್ಯ ವಹಿಸಿದ್ದ ಹತ್ಯಾಳನ ಪೂಜ್ಯ ಭಂತೆ ಧಮ್ಮಾನಾಗ ಮಹಾಥೆರೋ ಮಾತನಾಡಿ, ಬುದ್ಧ ಪೂರ್ಣಿಮೆಯ ದಿನವಾದ ಬುದ್ಧ ಜಯಂತಿಯ ದಿನ ಡಾ.ಅಂಬೇಡ್ಕರ್ ಮೂರ್ತಿ ಅನಾವರಣ ಮಾಡಿರುವುದಕ್ಕೆ ಮೆಚ್ಚುಗೆ ವ್ಯಕ್ತಪಡಿಸಿ, ಕರ್ನಾಟಕದಲ್ಲಿ ರಾಜ್ಯ ಸರ್ಕಾರದಿಂದ ಬುದ್ಧ ಜಯಂತಿ ಆಚರಣೆ ಮಾಡುತ್ತಿರುವುದಕ್ಕೆ ಧನ್ಯವಾದ ತಿಳಿಸುವದಾಗಿ ಹೇಳಿದರು.
ಕರ್ನಾಟಕ ಮೀನುಗಾರಿಕೆ ಅಭಿವೃದ್ದಿ ನಿಗಮದ ಅಧ್ಯಕ್ಷೆ ಮಾಲಾ.ಬಿ. ನಾರಾಯಣರಾವ, ವೈಸ್ ಆಫ್ ಅಂಬೇಡ್ಕರ್ ಸಂಘಟನೆಯ ರಾಜ್ಯಾಧ್ಯಕ್ಷ ಸುರೇಶ ಮೋರೆ ಮಾತನಾಡಿದರು. ಅಂಬಾರಾಯ ಸೈದಾಪುರೆ ಸ್ವಾಗತಿಸಿ ನಿರೂಪಣೆ ಮಾಡಿದರು.
ಕಲಬುರಗಿಯ ಮುಖಂಡ ಸುರೇಶ ಹಾದಿಮನಿ, ಬಸವಕಲ್ಯಾಣ ವಕೀಲರ ಸಂಘದ ಅಧ್ಯಕ್ಷ ಭೀಮಾಶಂಕರ ಕುರಕೋಟೆ, ಡಿಎಸ್‌ಎಸ್ ತಾಲೂಕು ಸಮಿತಿ ಅಧ್ಯಕ್ಷ ವಾಮನ ಮೈಸಲಗೆ, ವಿದ್ಯಾರ್ಥಿ ಒಕ್ಕೂಟದ ಅಧ್ಯಕ್ಷ ಮಲ್ಲಿಕಾರ್ಜುನ ಮಾಲೆ, ಹಣಮಂತರಾಯ ಕಾಂಬಳೆ, ಆರತಿ ಪಾಟೀಲ್, ಶಿಕ್ಷಕರ ಸಂಘದ ತಾಲೂಕು ಉಪಾಧ್ಯಕ್ಷ ರಮೇಶ ಉಮ್ಮಾಪುರೆ, ಸರ್ಕಾರಿ ನಿವೃತ್ತ ನೌಕರ ಸಂಘದ ತಾಲೂಕು ಗೌರವ ಅಧ್ಯಕ್ಷ ಬಸವಣ್ಣಪ್ಪ ನೆಲ್ಲಗಿ, ಪ್ರಮುಖರಾದ ರಾಜಕುಮಾರ ಕಾಂಬಳೆ, ಭಾನುದಾಸ ಗಾಯಕವಾಡ. ದಯಾನಂದ ಗಾಯಕವಾಡ, ಕೇರನಾಥ ಕಾಂಬಳೆ, ಜೈಹಿಂದ ಕಾಂಬಳೆ, ವಿಠಲ್ ಕಾಂಬಳೆ, ಮಾರುತಿ ಕಾಂಬಳೆ, ವಿಠಲ್ ಗಾಯಕವಾಡ ಇತರರಿದ್ದರು.
ಎರಡು ನಿಮಿಷ ಮೌನಾಚರಣೆ ನಡೆಸಿ ಭಾರತ -ಪಾಕ್ ಸಂಘರ್ಷದಲ್ಲಿ ದೇಶಕ್ಕಾಗಿ ಹೋರಾಡಿ ಹುತಾತ್ಮರಾದ ವೀರ ಯೋಧರಿಗೆ ಶ್ರದ್ಧಾಂಜಲಿ ಸಲ್ಲಿಸಲಾಯಿತು.
ವಿಶ್ವದಲ್ಲಿ ಶಾಂತಿ ನೆಲಸಬೇಕಾದರೆ ಒಂದೇ ಮಾರ್ಗವಿದೆ. ಅದು ಬುದ್ಧ ಮಾರ್ಗ, ಭಗವಾನ ಬುದ್ಧರ ವಿಚಾರ ಹಾಗೂ ಅವರು ತೋರಿದ ಮಾರ್ಗದಲ್ಲಿ ಎಲ್ಲರೂ ನಡೆದಾದ ನಿಶ್ವಿತವಾಗಿಯೂ ಇಡೀ ವಿಶ್ವದಲ್ಲಿ ಶಾಂತಿ ನೆಲೆಸಲು ಸಾಧ್ಯವಾಗುತ್ತದೆ.
| ಪೂಜ್ಯ ಭಂತೆ ಧಮ್ಮಾನಾಗ ಮಹಾಥೇರೋ
ಹತ್ಯಾಳ ಗ್ರಾಮದಲ್ಲಿ ಡಾ.ಅಂಬೇಡ್ಕರ್ ಭವ್ಯ ಮೂರ್ತಿ ಲೋಕಾರ್ಪಣೆ ಮಾಡಿರುವುದು ಸಂತಸ ತಂದಿದೆ. ಓದಲು ಅನುಕೂಲಕ್ಕಾಗಿ ಗ್ರಾಮದಲ್ಲಿ ಗ್ರಂಥಾಲಯ ಮಂಜೂರಿ ಮಾಡಿಸಲು ಪ್ರಾಮಾಣಿಕವಾಗಿ ಪ್ರಯತ್ನಿಸುತ್ತೇನೆ. ಗ್ರಾಮದಲ್ಲಿ ಅಗತ್ಯವಿರುವ ಸೌಲಭ್ಯ ಕಲ್ಪಿಸಲು ಬದ್ಧನಾಗಿದ್ದೇನೆ.
| ಶರಣು ಸಲಗರ ಶಾಸಕ