ಬೈಕ್ ಸವಾರನ ಮೇಲೆ ಕಾಡಾನೆ ದಾಳಿ

26 ckm 8
ಕಾಡಾನೆ ದಾಳಿಗೆ ಒಳಗಾಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಸುಬ್ರಹ್ಮಣ್ಯ.
Published on

ಚಿಕ್ಕಮಗಳೂರು: ರಸ್ತೆಯಲ್ಲಿ ತೆರಳುತ್ತಿದ್ದ ಬೈಕ್ ಸವಾರನ ಮೇಲೆ ಕಾಡಾನೆ ದಾಳಿ ನಡೆಸಿದ ಪರಿಣಾಮ ಸವಾರ ಗಂಭೀರವಾಗಿ ಗಾಯಗೊಂಡಿರುವ ಘಟನೆ ತಾಲೂಕಿನ ಕೊಳಗಾಮೆಯಲ್ಲಿ ನಡೆದಿದೆ. ಕಾಫಿ ಎಸ್ಟೇಟ್ ನಲ್ಲಿ ರೈಟರ್ ಆಗಿರುವ ಸುಬ್ರಹ್ಮಣ್ಯ ಆನೆ ದಾಳಿಗೊಳಗಾಗಿ ಆಸ್ಪತ್ರೆ ಸೇರಿರುವ ದುರ್ದೈವಿ.

ಸುಬ್ರಹ್ಮಣ್ಯ ಎಂದಿನಂತೆ ಮನೆಯಿಂದ ಎಸ್ಟೇಟ್ ಗೆ ಬೈಕ್ ನಲ್ಲಿ ತೆರಳುತ್ತಿದ್ದಾಗ ಕಾಡಾನೆ ಏಕಾಏಕಿ ದಾಳಿ ನಡೆಸಿದೆ. ಈ ವೇಳೆ ಸುಬ್ರಹ್ಮಣ್ಯ ಬೈಕ್ ನಿಂದ ಕೆಳಗೆ ಬಿದ್ದಾಗ ಆತನ ಮೇಲೆ ಕಾಡಾನೆ ದಾಳಿ ನಡೆಸಿದೆ. ಆದರೆ ಅದೃಷ್ಟವಶಾತ್ ಕೂದಲೆಳೆ ಅಂತರದಲ್ಲಿ ಸುಬ್ರಮಣ್ಯ ಪ್ರಾಣಪಾಯದಿಂದ ಪಾರಾಗಿದ್ದಾರೆ. ಕೂಡಲೆ ಸುಬ್ರಹ್ಮಣ್ಯ ಅವರನ್ನು ಚಿಕ್ಕಮಗಳೂರು ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿದೆ. ಸ್ಥಳಕ್ಕೆ ಅರಣ್ಯ ಇಲಾಖೆ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net