ಉಚಿತ ಶಿಬಿರ ಸದ್ಬಳಕೆಯಾಗಲಿ

8nagar1
Published on

ನಾಗರಮುನ್ನೋಳಿ: ಆರೋಗ್ಯಯುತ ಸಮಾಜ ನಿರ್ಮಾಣಕ್ಕೆ ಪ್ರತಿಯೊಬ್ಬರು ಕೈಜೋಡಿಸಬೇಕು ಎಂದು ಗ್ರಾಪಂ ಸದಸ್ಯ ಲಕ್ಷ್ಮಿಸಾಗರ ಈಟಿ ಹೇಳಿದರು.

ಗ್ರಾಮದ ಸಮುದಾಯ ಭವನದಲ್ಲಿ ಎಂ.ಎಂ.ಜೋಶಿ ನೇತ್ರ ವಿಜ್ಞಾನ ಸಂಸ್ಥೆ ಸಂಕೇಶ್ವರ ಹಾಗೂ ಶಿವಾನಂದ ರ‍್ಯಾಯಿ ಅಭಿಮಾನಿ ಬಳಗದ ಸಂಯುಕ್ತ ಆಶ್ರಯದಲ್ಲಿ ಭಾನುವಾರ ಹಮ್ಮಿಕೊಂಡಿದ್ದ ಕಣ್ಣು ತಪಾಸಣೆ ಉಚಿತ ಶಿಬಿರಕ್ಕೆ ಚಾಲನೆ ನೀಡಿ ಮಾತನಾಡಿ, ಗ್ರಾಮೀಣ ಭಾಗದಲ್ಲಿ ಬಡವರಿಗೆ ಅನುಕೂಲ ಒದಗಿಸುವ ದೃಷ್ಟಿಯಿಂದ ಕಣ್ಣು ತಪಾಸಣೆ ಉಚಿತ ಶಿಬಿರ ಏರ್ಪಡಿಸಲಾಗಿದೆ. ಎಲ್ಲರೂ ಇದರ ಸದುಪಯೋಗ ಮಾಡಿಕೊಳ್ಳಬೇಕು ಎಂದರು.

ಜಿಲ್ಲಾ ಯೂತ್ ಪ್ರಧಾನ ಕಾರ್ಯದರ್ಶಿ ಶಿವಾನಂದ ರ‍್ಯಾಯಿ ಮಾತನಾಡಿ, ಕಷ್ಟದಲ್ಲಿರುವವರಿಗೆ ಸಹಾಯ ಮಾಡುವ ಗುಣ ಪ್ರತಿಯೊಬ್ಬರು ಬೆಳೆಸಿಕೊಳ್ಳಬೇಕು. ಕಣ್ಣು ಎಲ್ಲರಿಗೂ ಅತ್ಯವಶ್ಯವಾಗಿದೆ ಎಂದು ಹೇಳಿದರು.

ಅನಿಲ ಈಟಿ, ಭೀರಪ್ಪ ನಾಗರಾಳೆ, ಕೆಂಪಯ್ಯ ಮಠಪತಿ, ಮಹಾದೇವ ಬೆಳಗಲಿ, ರಾಮು ಘಾವಡೆ ಇತರರು ಇದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net