27ರಂದು ಹುತ್ತರಿ ಹಬ್ಬ ಆಚರಣೆ

24Kush01 (1)
ಸುದ್ದಿಗೋಷ್ಠಿಯಲ್ಲಿ ಸಮಾಜದ ಅಧ್ಯಕ್ಷ ಚಿಲ್ಲನ ಗಣಿಪ್ರಸಾದ್
Published on

ಕುಶಾಲನಗರ: ಗೌಡ ಸಮಾಜದ ಸಹಯೋಗದದಲ್ಲಿ ನ.27 ರಂದು ಹುತ್ತರಿ ಹಬ್ಬವನ್ನು ವಿಜೃಂಭಣೆಯಿಂದ ಆಚರಿಸಲಾಗುವುದು ಎಂದು ಸಮಾಜದ ಅಧ್ಯಕ್ಷ ಚಿಲ್ಲನ ಗಣಿಪ್ರಸಾದ್ ತಿಳಿಸಿದರು.

ಅಂದು ಸಂಜೆ 7.45ಕ್ಕೆ ದೇವರಿಗೆ ಪೂಜೆ ಸಲ್ಲಿಸಿದ ಬಳಿಕ ನೆರೆಕಟ್ಟಿ ಮೆರವಣಿಗೆಯಲ್ಲಿ ಗಣಪತಿ ದೇವಾಲಯಕ್ಕೆ ತೆರಳಲಾಗುವುದು. ಗುಮ್ಮನಕೊಲ್ಲಿಯಲ್ಲಿ ಗೌಡ ಯುವಕ ಸಂಘದ ಗದ್ದೆಯಲ್ಲಿ ರಾತ್ರಿ 8.45 ಕ್ಕೆ ಗದ್ದೆಗೆ ಪೂಜೆ ಸಲ್ಲಿಸಿ ಸಾಂಪ್ರದಾಯಿಕವಾಗಿ ಕದಿರು ತೆಗೆದು ಜನಾಂಗದವರು, ಸಾರ್ವಜನಿಕರಿಗೆ ವಿತರಿಸಲಾಗುವುದು ಎಂದು ಸುದ್ದಿಗೋಷ್ಠಿಯಲ್ಲಿ ತಿಳಿಸಿದರು.

ಗೌಡ ಯುವಕ ಸಂಘದ ಅಧ್ಯಕ್ಷ ಕೊಡಗನ ಹರ್ಷ ಮಾತನಾಡಿ, ನಾಲ್ಕು ಗದ್ದೆಗಳಲ್ಲಿ ಕದಿರು ಬೆಳೆಯಲಾಗಿದ್ದು ಸಾರ್ವಜನಿಕರು ನೂಕುನುಗ್ಗಲಿಲ್ಲದೆ ಕದಿರು ಪಡೆದುಕೊಳ್ಳಬೇಕು ಎಂದು ಮನವಿ ಮಾಡಿದರು.

ಸಮಾಜದ ಉಪಾಧ್ಯಕ್ಷ ಸೆಟ್ಟೆಜನ ದೊರೆ ಗಣಪತಿ, ಕಾರ್ಯದರ್ಶಿ ಕುಲ್ಲಚನ ಹೇಮಂತ್, ಗೌಡ ಮಹಿಳಾ ಸ್ವಸಹಾಯ ಸಂಘದ ಅಧ್ಯಕ್ಷೆ ಸೂದನ ಲಲಿತಾ ಗಣೇಶ್, ಸಮಾಜದ ಸಹ ಕಾರ್ಯದರ್ಶಿ, ದಬ್ಬಡ್ಕ ಡಾಟಿ ಶಾಂತಕುಮಾರಿ ಸುದ್ದಿಗೋಷ್ಠಿಯಲ್ಲಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net