

ನಾಗಮಂಗಲ : ಆದಿಚುಂಚನಗಿರಿ ಶಿಕ್ಷಣ ಟಸ್ಟ್ ವ್ಯಾಪ್ತಿಯ ಶಾಲಾ-ಕಾಲೇಜುಗಳ ವಿದ್ಯಾರ್ಥಿಗಳಿಗೆ 2 ದಿನಗಳ ಕಾಲನಡೆಯಲಿರುವ 27ನೇ ಚುಂಚಾದ್ರಿ ಕಲೋತ್ಸವಕ್ಕೆ ಆದಿಚುಂಚನಗಿರಿ ಮಠದ ಶ್ರೀ ನಿರ್ಮಲಾನಂದನಾಥ ಸ್ವಾಮೀಜಿ ಮಂಗಳವಾರ ರಾತ್ರಿ ಚಾಲನೆ ನೀಡಿದರು.
ಆದಿಚುಂಚನಗಿರಿ ಕ್ರೀಡಾಂಗಣದಲ್ಲಿ ಹಮ್ಮಿಕೊಂಡಿದ್ದ ಸಮಾರಂಭದಲ್ಲಿ ಶ್ರೀ ಪ್ರಸನ್ನನಾಥ ಸ್ವಾಮೀಜಿ, ಶ್ರೀ ಸೋಮೇಶ್ವರನಾಥ ಸ್ವಾಮೀಜಿ, ವಾಗ್ಮಿ ಪ್ರೊ.ಕೃಷ್ಙೇಗೌಡ, ಆದಿಚುಂಚನಗಿರಿ ವಿವಿ ಉಪಕುಲಪತಿ ಡಾ.ಎಂ.ಎ.ಶೇಖರ್, ಡಾ.ಎ.ಟಿ.ಶಿವರಾಮು ಇದ್ದರು. ಕಲೋತ್ಸವದಲ್ಲಿ ನೃತ್ಯ, ಚರ್ಚಾಸ್ಪರ್ಧೆ, ಆಶುಭಾಷಣ ಸ್ಪರ್ಧೆ, ಪ್ರಬಂಧ ಸ್ಪರ್ಧೆ, ಜಾನಪದ ಗೀತೆ, ಭಾವಗೀತೆ, ಭಕ್ತಿಗೀತೆ, ಭಜನೆ, ಕವಿತೆವಾಚನ ಸೇರಿದಂತೆ ಹಲವು ಸ್ಪರ್ಧೆ ನಡೆಯಲಿವೆ. ಸ್ಪರ್ಧೆಗಳು ಪ್ರಾಥಮಿಕ, ಪ್ರೌಢಶಾಲಾ ಹಾಗೂ ಪದವಿಪೂರ್ವ ಕಾಲೇಜುಗಳ 3 ವಿಭಾಗಗಳಲ್ಲಿ ನೆರವೇರಲಿದೆ. ಆದಿಚುಂಚನಗಿರಿ ಶಿಕ್ಷಣ ಟ್ರಸ್ಟ್ ನ 500ಕ್ಕೂ ಹೆಚ್ಚು ವಿದ್ಯಾರ್ಥಿಗಳು ಲೋತ್ಸವ ಸ್ಪರ್ಧೆಯಲ್ಲಿ ಪಾಲ್ಗೊಳ್ಳಲಿರುವುದು ವಿಶೇಷ.