27ರಂದು ಅನ್ನ ದಾಸೋಹ ಕಾರ್ಯಕ್ರಮ

27ರಂದು ಅನ್ನ ದಾಸೋಹ ಕಾರ್ಯಕ್ರಮ
Published on

 ಹಾಸನ: ಸುತ್ತೂರು ಮಠದ ಡಾ. ಶ್ರೀ ಶಿವರಾತ್ರಿ ರಾಜೇಂದ್ರ ಮಹಾಸ್ವಾಮಿ ಅವರ 109ನೇ ಜನ್ಮ ದಿನಾಚರಣೆ ಅಂಗವಾಗಿ ನ.27ರಂದು ನಗರದ ಮಹಾವೀರ ವೃತ್ತದ ಬಳಿ ಪುಷ್ಪ ನಮನ ಹಾಗೂ ಅನ್ನ ದಾಸೋಹ ಕಾರ್ಯಕ್ರಮ ಆಯೋಜಿಸಲಾಗಿದೆ ಎಂದು ವೀರಶೈವ ಲಿಂಗಾಯತ ಮಹಾವೇದಿಕೆಯ ರಾಜ್ಯ ಸಮಿತಿ ಸದಸ್ಯ ವಸಂತ ಕುಮಾರ್ ತಿಳಿಸಿದರು.

ಪ್ರತಿ ವರ್ಷದಂತೆ ಈ ವರ್ಷವೂ ಕಾರ್ಯಕ್ರಮ ನಡೆಯುತ್ತಿದ್ದು ಕಾರ್ಯಕ್ರಮದಲ್ಲಿ ವಿವಿಧ ಮಠಾಧೀಶರು ಹಾಗೂ ವೀರಶೈವ ಲಿಂಗಾಯತ ಸಮುದಾಯದ ಮುಖಂಡರು ಭಾಗವಹಿಸಿ ಶ್ರೀ ಗಳ ಭಾವಚಿತ್ರಕ್ಕೆ ಪುಷ್ಪಾರ್ಚನೆ ಮಾಡಲಿದ್ದಾರೆ. ಅಂದು ಬೆಳಿಗ್ಗೆ 10 ಗಂಟೆಯಿಂದ ಸಂಜೆ 4 ಗಂಟೆವರೆಗೆ ಅನ್ನ ದಾಸೋಹ ಕಾರ್ಯಕ್ರಮ ನಡೆಯಲಿದೆ ಎಂದು ಶನಿವಾರ ಸುದ್ದಿಗೋಷ್ಠಿಯಲ್ಲಿ ಹೇಳಿದರು.

ವೀರಸಿಂಹಾಸನ ಮಹಾಸಂಸ್ಥಾನ ಮಠದ 23ನೇ ಮಠಾಧೀಶರಾದ ಪರಮಪೂಜ್ಯ ಜಗದ್ಗುರು ಡಾ.ಶ್ರೀ ಶಿವರಾತ್ರಿ ರಾಜೇಂದ್ರ ಮಹಾಸ್ವಾಮೀಜಿಯವರು 1916ರ ಆ.29ರಂದು ಜನಿಸಿದರು. ಕೇವಲ ಹನ್ನೆರಡು ವರ್ಷ ವಯಸ್ಸಿನವರಾಗಿದ್ದಾಗ 1928ರಂದು ಪವಿತ್ರ ಪೀಠವನ್ನು ಏರಿದರು. ಅವರು ತಮ್ಮ ಗುರುಗಳಾದ ಮಂತ್ರ ಮಹರ್ಷಿ ಜಗದ್ಗುರು ಶ್ರೀ ಶಿವರಾತ್ರೀಶ್ವರ ಮಹಾಸ್ವಾಮೀಜಿಯವರೊಂದಿಗೆ ಶ್ರೀಮಠದ ಜವಾಬ್ದಾರಿಯನ್ನು ವಹಿಸಿಕೊಂಡರು ಎಂದರು.

ಸುದ್ದಿಗೋಷ್ಠಿಯಲ್ಲಿ ವೀರಶೈವ ಸಮುದಾಯದ ಮುಖಂಡರಾದ ಪ್ರಸನ್ನ ಜಿಲ್ಲಾಧ್ಯಕ್ಷ, ಧರ್ಮ ಸಂಚಾಲಕ, ತೇಜು ಮೂರ್ತಿ, ದೇವರಾಜ್ ಇತರರು ಉಪಸ್ಥಿತರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net