27ರಂದು ಎಸ್‌ಸಿ,ಎಸ್‌ಟಿ ವಿದ್ಯಾರ್ಥಿಗಳ ಶೈಕ್ಷಣಿಕ ಸಮಾವೇಶ

CTD 19 AVP--002
Published on

ಚಿತ್ರದುರ್ಗ:ಡಾ.ಬಿ.ಆರ್.ಅಂಬೇಡ್ಕರ್ ವಿದ್ಯಾರ್ಥಿ ಪರಿಷತ್‌ನಿಂದ‘ಅಂಬೇಡ್ಕರ್‌ಉತ್ಸವ’ಎಸ್‌ಸಿ,ಎಸ್‌ಟಿ ವಿದ್ಯಾರ್ಥಿಗಳ ಶೈಕ್ಷಣಿಕ ಸ ಮಾವೇಶವನ್ನು ನಗರದ ತರಾಸು ರಂಗಮಂದಿರದಲ್ಲಿ ಆ.27ರಂದು ಬೆಳಗ್ಗೆ 11ಕ್ಕೆ ಆಯೋಜಿಸಲಾಗಿದೆ. ಈ ಕಾರ‌್ಯಕ್ರಮಕ್ಕೆ ಆಗಮಿಸುವಂತೆ ಪರಿಷತ್ ಅಧ್ಯಕ್ಷ ಬಿ.ಪಿ.ತಿಪ್ಪೇಸ್ವಾಮಿ,ಮಾಯಕೊಂಡ ಶಾಸಕ ಬಸವಂತಪ್ಪ ಮತ್ತಿತರರು,ಬೆಂಗಳೂರಲ್ಲಿ ಸಮಾಜ ಕಲ್ಯಾಣ ಸಚಿವ ಡಾ.ಎ ಚ್.ಸಿ.ಮಹಾದೇವಪ್ಪ ಅವರನ್ನು ಶನಿವಾರ ಭೇಟಿ ಮಾಡಿ ಆಹ್ವಾನಿಸಿದರು.
ಜಿಲ್ಲಾ ಉಸ್ತುವಾರಿ ಸಚಿವ ಡಿ.ಸುಧಾಕರ್,ರಾಜ್ಯಸಭಾ ಸದಸ್ಯ ಎಲ್.ಹನುಮಂತಯ್ಯ,ಶಾಸಕರು,ಮಾಜಿ ಸಚಿವ ಎಚ್.ಆಂಜನೇಯ, ಮಾಜಿ ಸಂಸದ ಬಿ.ಎನ್.ಚಂದ್ರಪ್ಪ ಮತ್ತಿತರರು ಕಾರ‌್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ. ಶೈಕ್ಷಣಿಕ ಕ್ಷೇತ್ರದ ಪ್ರಮುಖ ಸಮಸ್ಯೆಗಳ ಕುರಿತಂತೆ ಸಚಿವರೊಂದಿಗೆ ಚರ್ಚಿಸುವ ಸಲುವಾಗಿ ವಿದ್ಯಾರ್ಥಿಗಳು ಹೆಚ್ಚಿನ ಸಂಖ್ಯೆಯಲ್ಲಿ ಈ ಕಾರ‌್ಯಕ್ರಮದಲ್ಲಿ ಭಾಗವಹಿಸಬೇಕು. ಹೆಚ್ಚಿನ ಮಾಹಿತಿಗೆ ತಮ್ಮನ್ನು ಸಂಪರ್ಕಿಸಬಹುದೆಂದು (9900592473)ಬಿ.ಪಿ.ತಿಪ್ಪೇಸ್ವಾಮಿ ಹೇಳಿಕೆಯಲ್ಲಿ ತಿಳಿಸಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net