27ರಂದು ಧರ್ಮಪುರದಲ್ಲಿ ಜಿಲ್ಲಾ ಮಟ್ಟದ ಜನತಾ ದರ್ಶನ

D SUDAKAR D HYR
Published on

ಚಿತ್ರದುರ್ಗ: ಹಿರಿಯೂರು ತಾಲೂಕು ಧರ್ಮಪುರದ ವಾಸವಿ ಕಲ್ಯಾಣ ಮಂಟಪದಲ್ಲಿ ನ.27ರಂದು ಬೆಳಗ್ಗೆ 10 ಗಂಟೆಗೆ ಜಿಲ್ಲಾ ಮಟ್ಟದ ಜನತಾ ದರ್ಶನ ಕಾರ್ಯಕ್ರಮ ಏರ್ಪಡಿಸಲಾಗಿದೆ. ಜಿಲ್ಲಾ ಉಸ್ತುವಾರಿ ಸಚಿವ ಡಿ. ಸುಧಾಕರ್ ಅವರು ಕಾರ್ಯಕ್ರಮದಲ್ಲಿ ಸಾರ್ವಜನಿಕರಿಂದ ಅಹವಾಲು ಸ್ವೀಕರಿಸಿ, ಸ್ಥಳದಲ್ಲಿಯೇ ಪರಿಹಾರ ಸೂಚಿಸಲಿದ್ದಾರೆ. ಸಾರ್ವಜನಿಕರು ತಮ್ಮ ಕುಂದುಕೊರತೆ, ಅಹವಾಲು ಅರ್ಜಿಗಳನ್ನು ಸಲ್ಲಿಸಬಹುದಾಗಿದೆ ಎಂದು ಹಿರಿಯೂರು ತಹಸೀಲ್ದಾರ್ ರಾಜೇಶಕುಮಾರ್ ತಿಳಿಸಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net