27ರಂದು ನಗರದಲ್ಲಿ ಖಾದಿ ಮಹೋತ್ಸವ

CTD 6 DC--04
Published on

ಚಿತ್ರದುರ್ಗ: ಕೇಂದ್ರದ ಸೂಕ್ಷ್ಮ, ಸಣ್ಣ ಮತ್ತು ಮಧ್ಯಮ ಉದ್ಯಮಗಳ ಸಚಿವಾಲಯ ಹಾಗೂ ಖಾದಿ ಮತ್ತು ಗ್ರಾಮೋದ್ಯೋಗ ಆಯೋಗದಿಂದ ಅ.27ರಂದು ನಗರದಲ್ಲಿ ಖಾದಿ ಮಹೋತ್ಸವ ಏರ್ಪಡಿಸಲಾಗಿದೆ. ಇದರ ಅಂಗವಾಗಿ ಪ್ರತಿಜ್ಞಾವಿಧಿ ಸ್ವೀಕಾರ, ಜಾಗೃತಿ ಜಾಥಾ ಹಾಗೂ ಖಾದಿ ಯಾತ್ರೆ ಹಾಗೂ ವಸ್ತು ಪ್ರದರ್ಶನ ಉದ್ಘಾಟನೆ ಆಗಲಿದೆ.
ನಗರದ ಸರ್ಕಾರಿ ವಿಜ್ಞಾನ ಕಾಲೇಜು ಮೈದಾನದಲ್ಲಿ ಬೆಳಗ್ಗೆ 9.30ಕ್ಕೆ ಪ್ರತಿಜ್ಞಾ ವಿಧಿ ಸ್ವೀಕಾರ ಕಾರ‌್ಯಕ್ರಮ ಹಾಗೂ ಜಾಗೃತಿ ಜಾಥಾಕ್ಕೆ ಡಿಸಿ ಜಿಆರ್‌ಜೆ ದಿವ್ಯಾಪ್ರಭು, ಜಿಪಂ ಸಿಇಒ ಎಸ್.ಜೆ.ಸೋಮಶೇಖರ್ ಹಾಗೂ ಎಸ್‌ಪಿ ಧರ್ಮೇಂದ್ರಕುಮಾರ್ ಮೀನಾ ಚಾಲನೆ ನೀಡುವರು. ಕೈಗಾರಿಕಾ ಪ್ರದೇಶ, ಚಳ್ಳಕೆರೆ ಗೇಟ್, ಗಾಂಧಿ ವೃತ್ತದಿಂದ ಒನಕೆ ಓಬವ್ವ ವೃತ್ತದ ಮೂಲಕ ಡಿಸಿ ಕಚೇರಿ ಆವರಣವನ್ನು ಜಾಥಾ ತಲುಪಲಿದೆ.
ಅಲ್ಲಿ ಖಾದಿ ಆಯೋಜಿಸಿರುವ ಖಾದಿಯಾತ್ರೆ ಮತ್ತು ವಸ್ತು ಪ್ರದರ್ಶನವನ್ನು ಗಣ್ಯರು ಉದ್ಘಾಟಿಸಲಿದ್ದಾರೆ ಎಂದು ಆಯೋಗದ ಉಪನಿರ್ದೇಶಕ ಸೆಂತಿಲ್ ರಾಮಸ್ವಾಮಿ ತಿಳಿಸಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net