27ರಂದು ರಾಜ್ಯ ಮಟ್ಟದ ಹ್ಯಾಂಡ್ ಬಾಲ್ ಪಂದ್ಯಾವಳಿ

24_HSN_01
Published on

ಹಾಸನ: ನಗರದಲ್ಲಿ ಡಿ.27ರಂದು ರಾಜ್ಯಮಟ್ಟದ ಹೊನಲು-ಬೆಳಕಿನ 20 ವರ್ಷದ ವಯೋಮಿತಿಯ ಪುರುಷರು ಮತ್ತು ಮಹಿಳೆಯರ ಹ್ಯಾಂಡ್ ಬಾಲ್ ಪಂದ್ಯಾವಳಿ ನಡೆಯಲಿದ್ದು ಈ ಹಿನ್ನೆಲೆಯಲ್ಲಿ ಮಂಗಳವಾರ ಕ್ರೀಡಾಂಗಣದ ಸಭಾಂಗಣದಲ್ಲಿ ಶಾಸಕ ಸ್ವರೂಪ್ ಪ್ರಕಾಶ್ ಅಧ್ಯಕ್ಷತೆಯಲ್ಲಿ ಪೂರ್ವಭಾವಿ ಸಭೆ ನಡೆಸಲಾಯಿತು.

ಹಾಸನ ಜಿಲ್ಲಾ ಹ್ಯಾಂಡ್ ಬಾಲ್ ಸಂಸ್ಥೆ (ರಿ) ಹಾಗೂ ಕರ್ನಾಟಕ ಹ್ಯಾಂಡ್ ಬಾಲ್ ಸಂಸ್ಥೆ, ಯುವಸಬಲೀಕರಣ ಮತ್ತು ಕ್ರೀಡಾ ಇಲಾಖೆ ಇವರ ಸಹಯೋಗದಲ್ಲಿ ನಡೆಯಲಿರುವ ಕ್ರೀಡಾಕೂಟದ ತಯಾರಿ ಬಗ್ಗೆ ಶಾಸಕರು ಅಧಿಕಾರಿಗಳಿಂದ ಮಾಹಿತಿ ಪಡೆದರು.

ಕ್ರೀಡಾಂಗಣದಲ್ಲಿ ಸಾರ್ವಜನಿಕರು ಎದುರಿಸುತ್ತಿರುವ ಸಮಸ್ಯೆಗಳ ಬಗ್ಗೆ ಅಧಿಕಾರಿಗಳೊಂದಿಗೆ ಚರ್ಚಿಸಿದ ಶಾಸಕರು, ಶೌಚಾಲಯ, ಕುಡಿಯುವ ನೀರು, ಕ್ರೀಡಾಂಗಣದ ಸ್ವಚ್ಛತೆಗೆ ಪ್ರಾಮುಖ್ಯತೆ ನೀಡಿ ಸಮಸ್ಯೆಗಳಿದ್ದರೆ ತನ್ನ ಗಮನಕ್ಕೆ ತಂದಲ್ಲಿ ಬಗೆಹರಿಸಲಾಗುವುದು ಎಂದರು.

ನಗರಸಭೆ ಅಧ್ಯಕ್ಷ ಚಂದ್ರೇಗೌಡ, ಕ್ರೀಡಾ ಇಲಾಖೆಯ ಹರೀಶ್ ಹಾಗೂ ವಿವಿಧ ಕ್ರೀಡಾ ಸಂಸ್ಥೆಗಳ ಮುಖ್ಯಸ್ಥರು ಇದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net