ಗುಂಡಿ ತಪ್ಪಿಸಲು ಹೋಗಿ ಬಸ್​ಗಳ ಮುಖಾಮುಖಿ

BUS ACIDENT
Published on

ಅಣ್ಣಿಗೇರಿ: ಎನ್​ಎಚ್ 63ರಲ್ಲಿ ಗುಂಡಿ ತಪ್ಪಿಸಲು ಹೋಗಿ ಎರಡು ಬಸ್​ಗಳು ಮುಖಾಮುಖಿ ಡಿಕ್ಕಿಯಾಗಿ 28 ಜನರು ಗಾಯಗೆ ೂಂಡ ಘಟನೆ ಶ್ರುಕವಾರ ನಡೆದಿದೆ. ಹೊಸಪೇಟೆಯಿಂದ ಹುಬ್ಬಳ್ಳಿಗೆ ಸಂಪರ್ಕ ಕಲ್ಪಿಸುವ ರಾಷ್ಟ್ರೀಯ ಹೆದ್ದಾರಿ 63ರ ಅಣ್ಣಿಗೇರಿ ಬಳಿಯ ಕೂಡು ರಸ್ತೆಗಳಲ್ಲಿ ಗುಂಡಿಗಳು ಬಿದ್ದಿವೆ. ಈ ಗುಂಡಿ ತಪ್ಪಿಸಲು ಹೋಗಿ ಹುಬ್ಬಳ್ಳಿಯಿಂದ ಅಣ್ಣಿಗೇರಿ ಮಾರ್ಗವಾಗಿ ಗದಗ ಕಡೆ ಹೊರಟಿದ್ದ ಬಸ್ ಹಾಗೂ ಹಂಪಿಯಿಂದ ಹುಬ್ಬಳ್ಳಿ ಕಡೆ ತೆರಳುತ್ತಿದ್ದ ಮತ್ತೊಂದು ಬಸ್ ನಡುವೆ ಮುಖಾಮುಖಿ ಡಿಕ್ಕಿಯಾಗಿದೆ. ಗಾಯಗೊಂಡವರಿಗೆ ಅಣ್ಣಿಗೇರಿ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಪ್ರಥಮ ಚಿಕಿತ್ಸೆ ನೀಡಿ ಹುಬ್ಬಳ್ಳಿಯ ಕಿಮ್್ಸ ಹಾಗೂ ಗದಗನ ಜಿಮ್್ಸ ಆಸ್ಪತ್ರೆಗೆ ದಾಖಲಿಸಲಾಗಿದೆ. ಈ ಕುರಿತು ಅಣ್ಣಿಗೇರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net