280 ಜನರಿಗೆ ತಲಾ 10 ಸಾವಿರ ರೂ. ಪ್ರೋತ್ಸಾಹಧನ ಮಂಜೂರು

01010
Published on

ಚಿಕ್ಕೋಡಿ: ಕರೊನಾ ಸಂದರ್ಭದಲ್ಲಿ ಬೀದಿ ವ್ಯಾಪಾರಿಗಳು ವ್ಯಾಪಾರವಿಲ್ಲದೆ ಕಷ್ಟ ಅನುಭವಿಸುತ್ತಿರುವುದರಿಂದ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವೆ ಶಶಿಕಲಾ ಜೊಲ್ಲೆ ಅವರು 280 ಜನರಿಗೆ ತಲಾ 10 ಸಾವಿರ ರೂ. ಪ್ರೋತ್ಸಾಹಧನ ಮಂಜೂರು ಮಾಡಿಸಿ ಅವರ ಕಷ್ಟಗಳಿಗೆ ಸ್ಪಂದಿಸಿದ್ದಾರೆ ಎಂದು ಸಂಸದ ಅಣ್ಣಾಸಾಹೇಬ ಜೊಲ್ಲೆ ಹೇಳಿದರು.

ಪಟ್ಟಣದ ಬಿಜೆಪಿ ಕಚೇರಿಯಲ್ಲಿ ಬೀದಿ ವ್ಯಾಪಾರಿಗಳಿಗೆ ನೇರವಾಗಿ ಅವರ ಖಾತೆಗೆ ಹಣ ಜಮೆ ಆದ ಬಗ್ಗೆ ಪತ್ರ ವಿತರಿಸಿ ಅವರು ಮಾತನಾಡಿದರು. ಚಿಕ್ಕೋಡಿ ಜಿಲ್ಲಾ ಬಿಜೆಪಿ ಮಹಿಳಾ ಮೋರ್ಚಾ ಅಧ್ಯಕ್ಷೆ ಶಾಂಭವಿ ಅಶ್ವತ್ಥಪುರ, ಶಂಕುತಲಾ ದೋಣವಾಡೆ, ಉದ್ಯಮಿ ಸಂಜಯ ಅರಗೆ, ಸಿದ್ದಪ್ಪ ಡಂಗೇರ ಇತರರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net