28ರಂದು ಕೈಗಾರಿಕೆ ಮಾಹಿತಿ ಕಾರ್ಯಗಾರ

Published on

ಚಾಮರಾಜನಗರ: ಕೈಗಾರಿಕೆ ಮತ್ತು ವಾಣಿಜ್ಯ ಇಲಾಖೆ ಹಾಗೂ ಬೆಂಗಳೂರಿನ ಕಾಸಿಯಾ ಸಹಯೋಗದಲ್ಲಿ ಕೈಗಾರಿಕೆ ಮತ್ತು ವಾಣಿಜ್ಯ ಇಲಾಖೆಯ ವಿವಿಧ ಯೋಜನೆಗಳ ಬಗ್ಗೆ ಮಾಹಿತಿ ನೀಡುವ ಕಾರ್ಯಕ್ರಮವನ್ನು ನ.28ರಂದು ಬೆಳಗ್ಗೆ 10.30 ಗಂಟೆಗೆ ನಗರದ ನಿಜಗುಣ ರೆಸಾರ್ಟ್ ಸಭಾಂಗಣದಲ್ಲಿ ಏರ್ಪಡಿಸಲಾಗಿದೆ.

ಕಾರ್ಯಕ್ರಮದಲ್ಲಿ ಜೆಡ್.ಇ.ಡಿ ಸರ್ಟಿಫಿಕೆಟ್, ಲೀನ್ ಮ್ಯಾನುಫ್ಯಾಕ್ಚರಿಂಗ್, ಕ್ಲಸ್ಟರ್ ಡೆವಲಪ್‌ಮೆಂಟ್ ಪ್ರೋಗ್ರಾಮ್, ಎಕ್ಸ್‌ಪೋರ್ಟ್ ಮ್ಯಾನೇಜ್‌ಮೆಂಟ್ ಮುಂತಾದ ಇಲಾಖೆಯ ಹೊಸ ಯೋಜನೆಗಳ ಬಗ್ಗೆ ಉದ್ದಿಮೆದಾರರಿಗೆ ಮಾಹಿತಿ ನೀಡಲಾಗುವುದು. ಕಾರ್ಯಕ್ರಮದಲ್ಲಿ ಜಿಲ್ಲೆಯ ಉದ್ದಿಮೆದಾರರು ಭಾಗವಹಿಸಿ ಮಾಹಿತಿ ಪಡೆಯಬಹುದು. ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ಕೈಗಾರಿಕಾ ಕೇಂದ್ರ ಚಾಮರಾಜನಗರ ದೂ.08226-224915 ಸಂಪರ್ಕಿಸುವಂತೆ ಜಿಲ್ಲಾ ಕೈಗಾರಿಕಾ ಕೇಂದ್ರದ ಜಂಟಿ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net