28ರಂದು ಕೋಟಿ ಕಂಠ ಗಾಯನ

Published on

ಮೈಸೂರು: ಕನ್ನಡ ಮತ್ತು ಸಂಸ್ಕೃತಿ ಇಲಾಖೆಯಿಂದ ಕನ್ನಡ ರಾಜ್ಯೋತ್ಸವದ ಅಂಗವಾಗಿ ಅ.28ರಂದು ನನ್ನ ನಾಡು ನನ್ನ ಹಾಡು ಶೀರ್ಷಿಕೆಯಡಿ ಕೋಟಿ ಕಂಠ ಗಾಯನ ಕಾರ್ಯಕ್ರಮ ಆಯೋಜಿಸಲಾಗಿದೆ. ಮೈಸೂರು ಅರಮನೆ ಆವರಣದಲ್ಲಿ ಅಂದು ಬೆಳಗ್ಗೆ 11ಕ್ಕೆ ಕಾರ್ಯಕ್ರಮ ಜರುಗಲಿದೆ. ಕನ್ನಡ ಗೀತೆ ಹಾಡುವವರು ವೆಬ್‌ಸೈಟ್ kkg.karnataka.gov.in ಮೂಲಕ ಹೆಸರು ನೋಂದಾಯಿಸಬಹುದು. ಅಂದು ಬೆಳಗ್ಗೆ 10 ಗಂಟೆಯೊಳಗೆ ಅರಮನೆಯ ಅಂಬಾವಿಲಾಸ ಅಥವಾ ವರಹಾ ದ್ವಾರ ಮೂಲಕ ಪ್ರವೇಶಿಸಬೇಕು. ಮಾಹಿತಿಗೆ ದೂರವಾಣಿ- 0821-2513225 ಅನ್ನು ಸಂಪರ್ಕಿಸಬಹುದು ಎಂದು ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಾಯಕ ನಿರ್ದೇಶಕ ಡಾ.ಎಂ.ಡಿ. ಸುದರ್ಶನ್ ತಿಳಿಸಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net